ಮಳೆಯಿಂದ ಮನೆ ಗೋಡೆ ಕುಸಿದು ಯುವತಿ ಸ್ಥಳದಲ್ಲೇ ಸಾವು, ಮತ್ತೊಬ್ಬಳು ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

Dharwad--01

ಧಾರವಾಡ, ಆ.23- ಭಾರೀ ಮಳೆಯಿಂದ ಮನೆಯ ಗೋಡೆ ಕುಸಿದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೊಬ್ಬ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಳ್ನಾವರ ಪಟ್ಟಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಶಿಕಲಾ (20) ಮೃತಪಟ್ಟ ಯುವತಿ.  ಭಾರೀ ಮಳೆಯಿಂದ ಗೋಡೆಗೆ ನೀರಿಳಿದಿದ್ದು , ತೇವಾಂಶ ಜಾಸ್ತಿಯಾದ ಹಿನ್ನೆಲೆಯಲ್ಲಿ ಗೋಡೆ ಕುಸಿದಿದ್ದು , ಇಟ್ಟಿಗೆಗಳು ಮನೆಯಲ್ಲಿ ಮಲಗಿದ್ದ ಶಶಿಕಲಾ ಮತ್ತು ಮುಕ್ತ ಎಂಬ ಯುವತಿಯರ ಮೇಲೆ ಬಿದ್ದಿದೆ.  ಶಶಿಕಲಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಮುಕ್ತಳ ಸ್ಥಿತಿ ಗಂಭೀರವಾಗಿದ್ದು , ಅಕ್ಕ ಪಕ್ಕದ ನಿವಾಸಿಗಳು ಆಕೆಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತೆಗೆ ದಾಖಲಿಸಿದ್ದಾರೆ.   ಅಳ್ನಾವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin