ಮಳೆ ಕೈಕೊಟ್ಟರೆ ಮೋಡ ಬಿತ್ತನೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiha-Jai

ಮೈಸೂರು, ಜೂ.24- ಜುಲೈ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಿಕೊಳ್ಳಲಾಗುವುದು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಗೆ ಮೊದಲು ಚುನಾವಣೆ ವದಂತಿಯನ್ನು ತಳ್ಳಿ ಹಾಕಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಖಾಲಿ ಇರುವ ಮೂರು ಸಚಿವ ಸ್ಥಾನಗಳನ್ನು ಶೀಘ್ರ ಭರ್ತಿ ಮಾಡಲಾಗುವುದು ಎಂದರು.. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ರಾಜ್ಯಪಾಲರಿಗೆ ರವಾನಿಸಲಾಗಿದೆ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಮಾಡುವ ವಿಷಯವನ್ನು ಸ್ಪಷ್ಟಪಡಿಸುವ ಮೂಲಕ ಅವಧಿಗೆ ಮುನ್ನ ಚುನಾವಣೆ ಬರಲಿದೆ ಎಂಬ ವಿಷಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ತೆರೆ ಎಳೆದರು. ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಬಾರಿ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಆಗದೆ ಇರುವುದರಿಂದ ಮೋಡ ಬಿತ್ತನೆ ಮಾಡಲು ಮುಂದಾಗಿದ್ದು, ಬಿತ್ತನೆಗಾಗಿ ಟೆಂಡರ್ ಕಾರ್ಯ ಈಗಲೇ ಪೂರ್ಣಗೊಳಿಸಿದ್ದು, ಮುಂದಿನ ತಿಂಗಳ ಆರಂಭದಲ್ಲಿ ಮೋಡ ಬಿತ್ತನೆ ಆರಂಭಿಸಲಾಗುವುದು ಎಂದು ತಿಳಿಸಿದರು. ನಿರೀಕ್ಷಿತ ಮಟ್ಟದಲ್ಲಿ ಮಂಗಾರು ಆಗದೆ ಇರುವುದರಿಂದ ಮೋಡ ಬಿತ್ತನೆಗಾಗಿ ಟೆಂಡರ್ ಕಾರ್ಯ ಈಗಾಗಲೇ ಪೂರ್ಣಗೊಳಿಸಿದ್ದು, ಮುಂದಿನ ತಿಂಗಳ ಆರಂಭದಲ್ಲಿ ಮೋಡ ಬಿತ್ತನೆ ಆರಂಭಿಸಲಾಗುವುದು ಎಂದು ಹೇಳಿದರು. ನಗರಾದ್ಯಂತ ಡೆಂಘೀ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಹೆಚ್‍ಡಿಕೆಗೆ ತಿರುಗೇಟು:

ಮುಖ್ಯಮಂತ್ರಿಯವರು ಕುಟುಂಬ ರಾಜಕಾರಣ ಮಾಡುತ್ತಿದ್ದಾರೆಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು 40 ವರ್ಷಗಳಿಂದ ರಾಜಕಾರಣ ಮಾಡುತ್ತಿದ್ದೇನೆ. ಹೆಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಎಷ್ಟು ಜನ ಶಾಸಕರಿದ್ದಾರೆ. ನಮ್ಮ ಕುಟುಂಬದಲ್ಲಿ ಎಷ್ಟು ಮಂದಿ ಶಾಸಕರಿದ್ದಾರೆ ಎಂಬುದು ಜನರಿಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು.   ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮಹಾನ್ ಸುಳ್ಳುಗಾರ. ಅವರ ಅವರ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಕೋಮು ಸಂಘರ್ಷದ ವಿಡಿಯೋ ತುಣುಕು ವೈರಲ್ ಆಗಿರುವ ಸಂಬಂಧ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.  ಕಲ್ಲಡ್ಕದ ಪ್ರಭಾಕರ್ ಭಟ್ ಅವರ ಕುರಿತು ಮಾತನಾಡಿರುವ ಅರಣ್ಯ ಸಚಿವ ರಮಾನಾಥ್ ರೈ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಲು ನಿರಾಕರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin