ಮಸಾಜ್ ಪಾರ್ಲರ್‍ನಲ್ಲಿ ವೇಶ್ಯಾವಾಟಿಕೆ : ಇಬ್ಬರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Prostitution

ಮೈಸೂರು, ಮೇ 4- ಮಸಾಜ್ ಪಾರ್ಲರ್‍ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿ ಐವರು ಮಹಿಳೆಯರನ್ನು ರಕ್ಷಿಸಿದ್ದಾರೆ.ಲಲಿತಾದ್ರಿಪುರ ನಿವಾಸಿ ಶಿವಣ್ಣ (45), ದೇವರಾಜ ಮೊಹಲ್ಲಾದ ಅನಿಲ್‍ಕುಮಾರ್ (29) ಬಂಧಿತರು. ಬಂಧಿತರು ನಗರದ ನೆಲ್ಸನ್ ಮಂಡೇಲಾ ರಸ್ತೆಯಲ್ಲಿರುವ ಎಂಎಫ್‍ಆರ್ ಕಂಫರ್ಸ್ ಮಸಾಜ್ ಪಾರ್ಲರ್‍ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ಸಂದರ್ಭದಲ್ಲಿ ಪಾರ್ಲರ್ ಮಾಲೀಕ ಸ್ಯಾಮ್‍ಸಂಗ್ ಮತ್ತು ಅನಿಲ್‍ಕುಮಾರ್ ಪರಾರಿಯಾಗಿದ್ದಾರೆ. ಈ ವೇಳೆ ಐವರು ಮಹಿಳೆಯರನ್ನು ರಕ್ಷಿಸಲಾಗಿದೆ. ಎನ್‍ಆರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin