ಮಹದಾಯಿ-ಕಾವೇರಿ ಸಮಸ್ಯೆ ಬಗೆಹರಿಸುವಲ್ಲಿ ಕಾಂಗ್ರೆಸ್ ವಿಫಲ

ಈ ಸುದ್ದಿಯನ್ನು ಶೇರ್ ಮಾಡಿ

mahadayi

ಚಿಕ್ಕಮಗಳೂರು, ಸೆ.9- ಮಹದಾಯಿ ಹಾಗೂ ಕಾವೇರಿ ಸಮಸ್ಯೆ ಬಗೆಹರಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರರ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ಕೆ.ಸುಂದರಗೌಡ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯವಾದಿ ನಾರಿಮನ್ ಸರ್ವೋಚ್ಚ ನ್ಯಾಯಾಲಯಕ್ಕೆ ರಾಜ್ಯದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಲು ವಿಫಲರಾಗಿದ್ದಾರೆ.

ನದಿ ಮೂಲಗಳಲ್ಲಿ ಬರಗಾಲ ಪೀಡಿತ ವಾತಾವರಣವಿದ್ದು, ಜನರಿಗೆ ಕುಡಿಯಲು ನೀರಿಲ್ಲದೆ ಪರದಾಡುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೇಜವಾಬ್ದಾರಿ ಎದ್ದು ಕಾಣುತ್ತಿದೆ ಎಂದು ದೂರಿದರು.ರಾಜ್ಯ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ರಾಜ್ಯದ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕವಾಗಿ ತಿಳಿಸಲು ಸೂಕ್ತ ತಜ್ಞರನ್ನು ನೇಮಿಸಬೇಕು. ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆ ಮುಖ್ಯಮಂತ್ರಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಾರ್ವಜನಿಕರ ಜೊತೆ ಸೇರಿ ಪ್ರತಿಭಟನೆಗೆ ಮುಂದಾಗುವುದು ಅನಿವಾರ್ಯ ಎಂದರು.

 

► Follow us on –  Facebook / Twitter  / Google+

Facebook Comments

Sri Raghav

Admin