ಮಹದಾಯಿ ಜಲವಿವಾದ : ಹೊಸ ಅರ್ಜಿ ಸಲ್ಲಿಸಲು ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

mahadavi

ನವದೆಹಲಿಜ.2- ಮಹದಾಯಿ ಜಲವಿವಾದಕ್ಕೆ ಸಂಬಂಧಿಸಿದಂತೆ ಹೊಸದಾಗಿ ಮೇಲ್ಮನವಿ ಅರ್ಜಿ ಸಲ್ಲಿಸಲು ಸರ್ವೋಚ್ಛ ನ್ಯಾಯಾಲಯ ಕರ್ನಾಟಕಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ. ಈ ಹಿಂದೆ 7 ಟಿಎಂಸಿ ನೀರಿಗಾಗಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧಿಕರಣ ವಜಾಗೊಳಿಸಿತ್ತು. ನಂತರ ಹೊಸ ಅಂಕಿ ಅಂಶಗಳೊಂದಿಗೆ ಪುನಃ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಸುಪ್ರೀಂಕೋರ್ಟ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಈ ಮೊದಲು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಾಪಸ್ ಪಡೆದಿದೆ. ಈಗ ಮಹದಾಯಿ ನದಿ ನೀರಿನ ಪಾಲಿಗಾಗಿ ಸುಪ್ರೀಂಕೋರ್ಟ್‍ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸುವ ಅವಕಾಶ ಕರ್ನಾಟಕ ಸರ್ಕಾರಕ್ಕೆ ಸಿಕ್ಕಿದಂತಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin