ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಪ್ರಧಾನಿ ಬಳಿಗೆ ಸಮಗ್ರ ವರದಿ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

siddu

ಮೈಸೂರು, ಅ.12-ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆಯಲ್ಲಿ ವ್ಯಕ್ತವಾಗುವ ವಿಷಯಗಳನ್ನು ಪ್ರಧಾನಿಮಂತ್ರಿಯವರ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಮಕೃಷ್ಣ ನಗರದಲ್ಲಿರುವ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅ.19ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಈ ಸಭೆಯಲ್ಲಿ ಸರ್ವಪಕ್ಷಗಳಿಂದ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ರೈತರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಕ್ಟೋಬರ್ 21ರಂದು ಮಹಾರಾಷ್ಟ್ರ , ಗೋವಾ, ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಈ ಸಭೆಯಲ್ಲಿ ಸರ್ವಪಕ್ಷಗಳ ಹಿರಿಯ ನಾಯಕರ, ಮುಖಂಡರ ಅಭಿಪ್ರಾಯಗಳನ್ನು ಪಡೆದು ಸಮಸ್ಯೆ ಕುರಿತು ಕೈಗೊಳ್ಳಬೇಕಾದ ತೀರ್ಮಾನಗಳ ಬಗ್ಗೆ ಚರ್ಚಿಸಲಾಗುವುದು ಎಂದರು. ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಅ.18ರಂದು ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ಈ ಬಾರಿ ರಾಜ್ಯಕ್ಕೆ ನ್ಯಾಯ ಸಿಗಬಹುದು ಎಂದು ಆಶಯ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ಸಾಹಿತಿ ದೇವನೂರು ಮಹಾದೇವ ಹಾಗೂ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಅವರ ಭೇಟಿ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲ.

► Follow us on –  Facebook / Twitter  / Google+

Facebook Comments

Sri Raghav

Admin