ಮಹದಾಯಿ ಹೋರಾಟ : 14 ಮಂದಿಗೆ ಕೋರ್ಟ್ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

14-Relaweed

ಧಾರವಾಡ, ಆ.11- ಮಹದಾಯಿ ನದಿ ನೀರಿಗೆ ಒತ್ತಾಯಿಸಿ ಹೋರಾಟ ನಡೆಸಿ ಬಂಧನಕ್ಕೆ ಒಳಗಾಗಿದ್ದ 14 ಮಂದಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಹೋರಾಟಗಾರರನ್ನು ಬಿಡುಗಡೆ ಮಾಡಲಾಗಿದೆ.   ಧಾರವಾಡ ಕೇಂದ್ರ ಕಾರಾಗೃಹದಿಂದ 14 ಮಂದಿಯನ್ನು ಬಿಡುಗಡೆಗೊಳಿಸಲಾಗುತ್ತಿದ್ದು ಜುಲೈ 28 ರಂದು ಕಳಸಾ ಬಂಡೂರಿ ಹಾಗೂ ಮಹದಾಯಿ ವಿವಾದದ ನ್ಯಾಯಾಧಿಕರಣ ತೀರ್ಪನ್ನು ಖಂಡಿಸಿ ಹೋರಾಟ ಆರಂಭಿಸಿದ್ದರು. ಈ ವೇಳೆ ಹೋರಾಟಗಾರರನ್ನು ಬಂಧಿಸಲಾಗಿತ್ತು. ನರಗುಂದ ಮೂಲದ 14 ಮಂದಿ ರೈತರಿಗೆ  ಕೋರ್ಟ್ ಜಾಮೀನು ಮಂಜೂರು ಮಾಡಲಾಗಿರುವುದರಿಂದ ಬಿಡುಗಡೆ ಮಾಡಲಾಗಿದೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಜೈಲಿನಲ್ಲಿರುವ ಅಮಾಯಕರನ್ನು ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ಕೈಗೊಳ್ಳಲಾಗಿತ್ತು. ಮಹದಾಯಿ ಮಧ್ಯಂತರ ತೀರ್ಪು ಹಿನ್ನೆಲೆಯಲ್ಲಿ ನಡೆದ ಗಲಭೆ, ಹಿಂಸಾಚಾರದ ವೇಳೆ ಒಟ್ಟು 187 ಮಂದಿಯನ್ನು ಯಮನೂರಿನ ಪೊಲೀಸರು ಬಂಧಿಸಿದ್ದರು. ಇವರನ್ನು ರಾಜ್ಯದ ವಿವಿಧ ಜೈಲುಗಳಲ್ಲಿ ಇರಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ನ್ಯಾಯಾಲಯಕ್ಕೆ ಕೆಲವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪರಿಶೀಲಿಸಿ ಮಂಜೂರಾತಿ ನೀಡಿದೆ.

► Follow us on –  Facebook / Twitter  / Google+

Facebook Comments

Sri Raghav

Admin