ಮಹಿಳಾ ಪೊಲೀಸ್ ಕಾನ್ಸ್ಟೆಬಲ್ ಮೇಲೆ ಆ್ಯಸಿಡ್ ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Police-01

ವೆಲ್ಲೂರು,ಡಿ.24-ಮುಸುಕುಧಾರಿ ದುಷ್ಕರ್ಮಿಗಳ ಗುಂಪೊಂದು ಮಹಿಳಾ ಪೊಲೀಸ್ ಪೇದೆ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ನಿನ್ನೆ ತಮಿಳುನಾಡಿನ ವೆಲ್ಲೂರು ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಲಾವಣ್ಯ(29) ಆ್ಯಸಿಡ್ ದಾಳಿಗೆ ಗುರಿಯಾಗಿದ್ದು, ಸುಟ್ಟ ಗಾಯಗಳಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕರ್ತವ್ಯ ಮುಗಿಸಿ ಪೊಲೀಸ್ ಸಮವಸ್ತ್ರದಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮುಸುಕುಧಾರಿ ದುಷ್ಕರ್ಮಿಗಳ ಗುಂಪೊಂದು ಅವರ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದೆ.
ಮುಖ ಮತ್ತು ಬಲಗೈಗೆ ಸುಟ್ಟ ಗಾಯಗಳಾಗಿದ್ದು , ನೋವಿನಿಂದ ನರಳುತ್ತಿದ್ದ ಲಾವಣ್ಯ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ವೆಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ಮುಸುಕುಧಾರಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download

Facebook Comments

Sri Raghav

Admin