ಮಹಿಳಾ ಮೀಸಲಾತಿ : ತಿದ್ದುಪಡಿಗೆ ದೇವೇಗೌಡರ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

JDS--01

ಬೆಂಗಳೂರು,ಜೂ.20 -ಮಹಿಳಾ ಮೀಸಲಾತಿ ಜಾರಿಗೆ ಸಂವಿಧಾನ ತಿದ್ದುಪಡಿ ಅಗತ್ಯವಿದ್ದು , ಪ್ರಸ್ತುತ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಸಾಧ್ಯವಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಇಂದಿಲ್ಲಿ ಹೇಳಿದರು.
ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಾನು ಪ್ರಧಾನಿಯಾಗಿದ್ದ ಅವಧಿಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದೆ.  ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗಿತ್ತು. ಲೋಕಸಭೆಯಲ್ಲಿ ಅಂಗೀಕಾರವಾಗಬೇಕಿದೆ ಎಂದರು.

ಕೇಂದ್ರ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸುವ ಮೂಲಕ ಮಹಿಳಾ ಮೀಸಲಾತಿಯನ್ನು ನೀಡಬೇಕು, ಆಗ ಇದ್ದ ಪರಿಸ್ಥಿತಿ ಈಗಿಲ್ಲ. ಬಿಜೆಪಿ ಬಹುಮತ ಹೊಂದಿದೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಮಹಿಳಾ ಮೀಸಲಾತಿ ಜಾರಿಗೆ ತಂದರೆ ಕಾಂಗ್ರೆಸ್, ಕಮ್ಯೂನಿಸ್ಟ್ ಸೇರಿದಂತೆ ಯಾವುದೇ ವಿಪಕ್ಷಗಳು ಅಡ್ಡಿಪಡಿಸುವುದಿಲ್ಲ ಎಂದು ಹೇಳಿದರು. ಈ ಮೀಸಲಾತಿ ಜಾರಿಗೊಳಿಸುವುದರಿಂದ ಮುಂಬರುವ ಚುನಾವಣೆಯಲ್ಲಿ 84 ಸ್ಥಾನಗಳು ಮಹಿಳೆಯರಿಗೆ ಲಭಿಸುತ್ತದೆ ಎಂದರು. 13 ಪಕ್ಷಗಳ ಮೈತ್ರಿಯೊಂದಿಗೆ ನಾನು ಪ್ರಧಾನಿಯಾಗಿದ್ದಾಗ ಈ ಮಸೂದೆಯನ್ನು ಜಾರಿಗೊಳಿಸಿದ್ದೆ ಎಂದು ಹೇಳಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು ಅಧಿಕಾರ ಹೊಂದುವುದನ್ನು ಅವರ ಗಂಡಂದಿರೇ ವಿರೋಧಿಸುತ್ತಿದ್ದರು.

ಈ ಪರಿಸ್ಥಿತಿಯನ್ನು ಮನಗಂಡೇ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಿದ್ದೆ. ಈಗ ಅದನ್ನು ಜಾರಿಗೊಳಿಸಲು ಕೇಂದ್ರಕ್ಕೆ ಉತ್ತಮ ಅವಕಾಶವಿದೆ. ಈ ಮೂಲಕ ಮಹಿಳೆಯರನ್ನು ಮತ್ತಷ್ಟು ಸದೃಢರನ್ನಾಗಿ ಮಾಡಬಹುದು ಎಂದು ಗೌಡರು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin