ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಐವರು ಆರೋಪಿಗಳ ಬಂಧನ 

ಈ ಸುದ್ದಿಯನ್ನು ಶೇರ್ ಮಾಡಿ

murder-6

ಚಿತ್ರದುರ್ಗ,ಮಾ.20- ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಐವರು ಆರೋಪಿಗಳನ್ನು ಅಬ್ಬಿನಹೊಳೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಕುಮಾರ್, ಹನುಮಂತಪ್ಪ , ಜಯಲಕ್ಷ್ಮಿ , ಲಕ್ಷ್ಮಮ್ಮ , ಗಂಗಮ್ಮ ಬಂಧಿತ ಆರೋಪಿಗಳು. ಹತ್ಯೆಯಲ್ಲಿ ಭಾಗಿಯಾಗಿದ್ದ ಇತರೆ ಆರೋಪಿಗಳ ಶೋಧ ನಡೆಸಲಾಗುತ್ತಿದೆ. ಹಿರಿಯೂರು ತಾಲ್ಲೂಕಿನ ಬೇತೂರುಪಾಳ್ಯದಲ್ಲಿ ಜಾಗದ ವಿಚಾರದಲ್ಲಿ ಸಿದ್ದಲಿಂಗಮ್ಮನೊಂದಿಗೆ ಜಗಳ ತೆಗೆದ ಆರೋಪಿಗಳು ಆಕೆಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಅಬ್ಬಿನಹೊಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin