ಮಹಿಳೆಯರು,ಮಕ್ಕಳ ಮೇಲೆ ಅತ್ಯಾಚಾರವೆಸಗುವವರ ವಿರುದ್ಧ ಗೂಂಡಾ ಕಾಯ್ದೆ

ಈ ಸುದ್ದಿಯನ್ನು ಶೇರ್ ಮಾಡಿ

Paramshwar--01

ಬೆಂಗಳೂರು, ಫೆ.7- ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರವೆಸಗುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಶಾಸಕ ಕೆ.ಗೋಪಾಲಯ್ಯ ಹಾಗೂ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ, ರಕ್ಷಣೆಗೆ ಪೊಲೀಸ್ ಇಲಾಖೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ ಎಂದರು.  ಪ್ರತ್ಯೇಕವಾಗಿ ಮಹಿಳಾ ಕೆಎಸ್‍ಆರ್‍ಪಿ ಬೆಟಾಲಿಯನ್ ಅಸ್ತಿತ್ವಕ್ಕೆ ತರಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ರಕ್ಷಣೆಗಾಗಿ ವಿಭಾಗಕ್ಕೊಂದು ಅಭಯ ಎಂಬ ಗಸ್ತು ವಾಹನವನ್ನು ಒದಗಿಸಲಾಗಿದೆ ಎಂದರು.

20 ಸಾವಿರ ಪೊಲೀಸ್ ಕಾನ್‍ಸ್ಟೆಬಲ್‍ಗಳನ್ನು ಹಾಗೂ 1 ಸಾವಿರ ಪೊಲೀಸ್ ಸಬ್ ಇನ್ಸ್‍ಪೆಕ್ಟರ್‍ಗಳನ್ನು ನೇಮಕ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ 160 ಪೊಲೀಸ್ ಸಬ್ ಇನ್ಸ್‍ಪೆಕ್ಟರ್‍ಗಳು ಕೆಲಸ ಮಾಡುತ್ತಿದ್ದಾರೆ. ಸಿಬ್ಬಂದಿ ಕೊರತೆ ಉಂಟಾಗದಂತೆ ಬೆಂಗಳೂರು ನಗರಕ್ಕೆ 2 ಸಾವಿರ ಕಾನ್‍ಸ್ಟೆಬಲ್‍ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.
ಇನ್ನೆರಡು ತಿಂಗಳಲ್ಲಿ ಬೆಂಗಳೂರಿಗೆ 500 ಸಿಸಿಟಿವಿ ಕ್ಯಾಮೆರಾಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುವುದು ಎಂದು ಹೇಳಿದರು.  ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ , ಸರಗಳ್ಳತನ ಪ್ರಕರಣಗಳ ಬಗ್ಗೆ ಮೂರ್ನಾಲ್ಕು ವರ್ಷಗಳಿಂದ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅಪರಾಧಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಹೇಳಿದರು.

2016ರಲ್ಲಿ 303 ಮಹಿಳೆಯರ ಮೇಲಿನ ಹಲ್ಲೆ ಪ್ರಕರಣಗಳು ದಾಖಲಾಗಿದ್ದರೆ 1423 ದೌರ್ಜನ್ಯ ಪ್ರಕರಣ ದಾಖಲಾಗಿದೆ. 923 ಲೈಂಗಿಕ ಕಿರುಕುಳದಂತಹ ಪ್ರಕರಣಗಳು ದಾಖಲಾಗಿದ್ದರೆ, 255 ಸರಗಳ್ಳತನ ಪ್ರಕರಣ ದಾಖಲಾಗಿದೆ ಎಂದು ವಿವರಿಸಿದರು.  ಮಹಿಳೆಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 280 ಪ್ರಕರಣಗಳು ಪತ್ತೆಯಾಗಿದ್ದರೆ, ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ 1423 ಪ್ರಕರಣಗಳು ಪತ್ತೆಯಾಗಿದೆ. 747 ಲೈಂಗಿಕ ಕಿರುಕುಳ ಹಾಗೂ 150 ಸರಗಳ್ಳತನವನ್ನು ಪತ್ತೆ ಮಾಡಲಾಗಿದೆ ಎಂದು ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin