ಮಹಿಳೆಯರು ನೆಮ್ಮದಿಯಿಂದ ಬದುಕಲು ಏಕೆ ಸಾಧ್ಯವಾಗಿಲ್ಲ : ಸುಪ್ರೀಂ ಪ್ರಶ್ನೆ

ಈ ಸುದ್ದಿಯನ್ನು ಶೇರ್ ಮಾಡಿ

Suprem-Court

ನವದೆಹಲಿ,ಏ.23-ದೇಶದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧ ಮತ್ತು ದೌರ್ಜನ್ಯ ಪ್ರಕರಣಗಳ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಈ ರಾಷ್ಟ್ರದಲ್ಲಿ ಮಹಿಳೆಯರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಏಕೆ ಸಾಧ್ಯವಾಗಿಲ್ಲ ಎಂದು ಕಟುವಾಗಿ ಪ್ರಶ್ನಿಸಿದೆ.   ಯುವತಿಯೊಬ್ಬಳಿಗೆ ಚುಡಾಯಿಸಿ ಅಪಮಾನ ಮಾಡಿ ಆಕೆಯ ಆತ್ಮಹತ್ಯೆಗೆ ಕಾರಣನಾದ ಆರೋಪದ ಮೇಲೆ ಏಳು ವರ್ಷ ಸಜೆ ವಿಧಿಸಿದ ಹಿಮಾಚಲ ಪ್ರದೇಶ ಹೈಕೋರ್ಟ್‍ನ ತೀರ್ಪನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ನ್ಯಾಯಪೀಠ ಈ ಪ್ರಶ್ನೆ ಕೇಳಿದೆ.ನಮ್ಮ ದೇಶದಲ್ಲಿ ಮಹಿಳೆಯರು ಏಕೆ ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಪೀಠವು ಯಾರೊಬ್ಬರು ಓರ್ವ ಯುವತಿ ಅಥವಾ ಮಹಿಳೆಗೆ ಪ್ರೀತಿಸುವಂತೆ ಬಲವಂತ ಮಾಡಲು ಸಾಧ್ಯವಿಲ್ಲ. ಅದು ಆಕೆಯ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಆಯ್ಕೆಯಾಗಿರುತ್ತದೆ. ಈ ವಿಷಯದಲ್ಲಿ ಹಿಮಾಚಲಪ್ರದೇಶ ಹೈಕೋರ್ಟ್ ನೀಡಿರುವ ತೀರ್ಪು ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin