ಮಾಜಿ ಲೋಕಾಯುಕ್ತ ಭಾಸ್ಕರರಾವ್ ಅವರಿಗೆ ಷರತ್ತುಬದ್ಧ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

Bhaskar-roa

ಬೆಂಗಳೂರು, ಜ.28- ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಲೋಕಾಯುಕ್ತ ನ್ಯಾ.ವೈ.ಭಾಸ್ಕರರಾವ್ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.  ಲೋಕಾಯುಕ್ತ ಸಂಸ್ಥೆಯಲ್ಲಿಯೇ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಹುದ್ದೆಗೆ ರಾಜೀನಾಮೆ ನೀಡಿ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ನ್ಯಾ.ಭಾಸ್ಕರರಾವ್ ಅವರಿಗೆ ಇಂದು ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತು. ಅನಾರೋಗ್ಯದ ಕಾರಣ ವಿಚಾರಣೆಗೆ ಭಾಸ್ಕರರಾವ್ ಅವರು ಗೈರು ಹಾಜರಾಗಿದ್ದರು. ಸಾಕ್ಷ್ಯಗಳ ನಾಶ ಮಾಡಬಾರದು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರಬಾರದು, ವಿಚಾರಣೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾತಂಡ (ಎಸ್‍ಐಟಿ) ಲೋಕಾಯುಕ್ತ ನ್ಯಾಯಾಲಯಕ್ಕ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin