ಮಾಜಿ ಸಚಿವ ಬಸವರಾಜ್ ಪಾಟೀಲ್ ನಿಧನ ಹಿನ್ನಲೆ ಹುಮ್ನಾಬಾದ್ ನಲ್ಲಿ ಸ್ವಯಂ ಘೋಷಿತ ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

Basavaraj-Pati--l;

ಬೀದರ್,ಆ.11-ಮಾಜಿ ಸಚಿವ ಬಸವರಾಜ್ ಪಾಟೀಲ್‍ರವರ  ನಿಧನದ ಹಿನ್ನಲೆಯಲ್ಲಿ ಇಂದು ಹುಮ್ನಾಬಾದ್ ಪಟ್ಟಣ ಸ್ವಯಂಪ್ರೇರಿತ ಬಂದ್ ಆಚರಿಸಿತು.   ಪಟ್ಟಣದ ಅಂಗಡಿಮುಗ್ಗಟ್ಟುಗಳನ್ನು ಮಾಲೀಕರು ಸ್ವಯಂಪ್ರೇರಿತರಾಗಿ ಮುಚ್ಚಿ ಶೋಕ ವ್ಯಕ್ತಪಡಿಸಿದರು. ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಾಹನ ಸಂಚಾರ ಕೂಡ ವಿರಳವಾಗಿತ್ತು. ಹಾಗಾಗಿ ಇಡೀ ಪಟ್ಟಣ ಸ್ವಯಂ ಘೋಷಿತ ಬಂದ್ ಆಚರಿಸಿದಂತೆ ಕಂಡುಬಂದಿತು.  ಅಂತ್ಯಕ್ರಿಯೆಯನ್ನು ಇಂದು ಮಧ್ಯಾಹ್ನ ಸಾವಿರಾರು ಮಂದಿ ಅಭಿಮಾನಿಗಳು, ಮುಖಂಡರ ಅಶ್ರುತರ್ಪಣದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.   ಬಸವರಾಜ್ ಪಾಟೀಲ್ ಅವರು ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಹಾಗೂ ಮೂರು ಬಾರಿ ವಿಧಾನಪರಿಷತ್ ಸದಸ್ಯರಾಗಿ ಕೆಲಸ ನಿರ್ವಹಿಸಿ ಜನಾನುರಾಗಿಯಾಗಿದ್ದರು.   ಅವರು ಮೂರು ಹೆಣ್ಣು ಮಕ್ಕಳು, ನಾಲ್ಕು ಗಂಡುಮಕ್ಕಳು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು  ಅಗಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಅವರ ಪಾರ್ಥೀವ ಶರೀರವನ್ನು ಮೆರವಣಿಗೆ ಮಾಡಿ ಮಧ್ಯಾಹ್ನ 12.30ರ ನಂತರ ಪಟ್ಟಣದ ತೇರ್ ಮೈದಾನದಲ್ಲಿ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿತ್ತು.
ನೂರಾರು ಮಂದಿ ಸರತಿಸಾಲಿನಲ್ಲಿ ನಿಂತು ಅಂತಿಮ ದರ್ಶನ ಪಡೆದು, ಕಂಪನಿ  ಮಿಡಿದರು.  ಮಧ್ಯಾಹ್ನ 3 ಗಂಟೆಗೆ ಕುಟುಂಬ ಸದಸ್ಯರು, ಅಭಿಮಾನಿಗಳು, ಮುಖಂಡರ ಸಮ್ಮುಖದಲ್ಲಿ ಬಸವರಾಜ್ ಪಾಟೀಲ್‍ರವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

  ಸಂತಾಪ:

ಬಸವರಾಜ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ,  ಮಾಜಿ ಮುಖ್ಯಮಂತ್ರಿಗಳಾದ ಧರಂಸಿಂಗ್, ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್,  ಸಚಿವರಾದ ಈಶ್ವರ್ ಖಂಡ್ರೆ, ಎಚ್.ಕೆ.ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ವಿಜಯ್ ಸಿಂಗ್ ಸೇರಿದಂತೆ ಸಚಿವರು, ಶಾಸಕರು, ಸಂಸದರು, ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin