ಮಾರಕಾಸ್ತ್ರಗಳಿಂದ ಕೊಚ್ಚಿ ಎಐಎಡಿಎಂಕೆ ಮುಖಂಡನ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Murdenz'kmld-vsdvm

ತಿರುವಣ್ಣಾಮಲೈ, ಫೆ.12- ಎಐಎಡಿಎಂಕೆ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಿಗ್ಗೆ ತಮಿಳುನಾಡಿನ ತಿರುವಣ್ಣಾಮಲೈನ ಅರುಣಾಚಲೇಶ್ವರ ದೇವಸ್ಥಾನದ ಬಳಿ ನಡೆದಿದೆ. ಕನಕರಾಜ್ ಕಗ್ಗೊಲೆಯಾದ ಎಐಎಡಿಎಂಕೆ ಮುಖಂಡ. ಇವರು ತಿರುವಣ್ಣಾಮಲೈ ಘಟಕದ ಪಕ್ಷದ ಕಾರ್ಯದರ್ಶಿಯಾಗಿದ್ದರು. ದೇಗುಲದ ಉತ್ತರ ದ್ವಾರದ ಬಳಿ ಈ ಘಟನೆ ನಡೆದಿದೆ. ಬೆಳಗಿನ ವಾಯುವಿಹಾರದಲ್ಲಿದ್ದ ಕನಕರಾಜ್ ಅವರ ಮೇಲೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿದ್ದರು. ತೀವ್ರ ಗಾಯಗಳಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರು. ಹತ್ಯೆ ಸಂಬಂಧ ಶೇಖರ್, ಬಾಬು ಮತ್ತು ಶರವಣನ್ ಎಂಬ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಈ ಭೀಕರ ಕೊಲೆಗೆ ಹಳೇ ವೈಷಮ್ಯವೇ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ ಒಂದು ಕಾರು ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin