ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Murder

ರಾಯಚೂರು,ಸೆ.23-ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಎಪಿಎಂಸಿ ಬಳಿ ನಡೆದಿದೆ. ವಿಜಯ್(22) ಮೃತ ಯುವಕನಾಗಿದ್ದು , ಈತ ಎಪಿಎಂಸಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ಕಳೆದ ರಾತ್ರಿ ಯಾರೋ ದುಷ್ಕರ್ಮಿಗಳು ಆತನ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಶವವನ್ನು ಇಲ್ಲಿಗೆ ತಂದು ಎಸೆದಿರಬಹುದು ಎಂದು ಶಂಕಿಸಲಾಗಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 

► Follow us on –  Facebook / Twitter  / Google+

 

 

Facebook Comments

Sri Raghav

Admin