ಮಾರ್ಕೆಟ್‍ನಲ್ಲಿ ಆಕಸ್ಮಿಕ ಬೆಂಕಿ : 2 ತರಕಾರಿ ಅಂಗಡಿ ಭಸ್ಮ

ಈ ಸುದ್ದಿಯನ್ನು ಶೇರ್ ಮಾಡಿ

Mysuru--01

ಮೈಸೂರು,ಸೆ.8-ನಗರದ ಅಗ್ರಹಾರ ವೃತ್ತದಲ್ಲಿನ ಚಿಕ್ಕ ಮಾರ್ಕೆಟ್‍ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಎರಡು ತರಕಾರಿ ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.  ಇಂದು ಬೆಳಗ್ಗೆ ಪ್ರಮೋದ್ ಎಂಬುವರಿಗೆ ಸೇರಿದ ಎರಡು ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಲಕ್ಷ ರೂ. ಮೌಲ್ಯದ ತರಕಾರಿ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿದೆ.  ಸಣ್ಣದಾಗಿ ಹೊಗೆ ಕಾಣಿಸಿಕೊಂಡಿದ್ದು , ನೋಡು ನೋಡುತ್ತಿದ್ದಂತೆ ಬೆಂಕಿ ಅಂಗಡಿಯೆಲ್ಲ ಆವರಿಸಿಕೊಂಡಿದ್ದರಿಂದ ಅಂಗಡಿಯಲ್ಲಿದ್ದ ತರಕಾರಿ, ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟುಹೋಗಿವೆ.

ಸ್ಥಳೀಯರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಿ ಆಗಮಿಸಿದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments

Sri Raghav

Admin