ಮಾಸ್ತಿಗುಡಿ ದುರಂತದಲ್ಲಿ ಮೃತಪಟ್ಟ ಅನಿಲ್-ಉದಯ್ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

Anil-and-Uday

ಬೆಂಗಳೂರು, ಮಾ.20-ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ದುರಂಗ ಸಾವಿಗೀಡಾದ ಸಾಹಸ ಕಲಾವಿದರಾದ ಅನಿಲ್ ಮತ್ತು ಉದಯ್ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಸಹಾಯ ಧನವನ್ನು ವಿತರಿಸಲಾಯಿತು. ಇಂದು ಸಂಜೆ ಚಲನಚಿತ್ರ ವಾಣಿಜ್ಯ ಮಂಡಳಿಯ ಕಚೇರಿಯಲ್ಲಿ ಅನಿಲ್ ಪತ್ನಿ ಹಾಗೂ ಉದಯ್ ತಂದೆ-ತಾಯಿಗೆ ಮಂಡಳಿಯ ಅಧ್ಯಕ್ಷ ಸಾ.ರಾ.ಗೋವಿಂದು, ಬೆಂಗಳೂರು ಉತ್ತರ ತಹಸೀಲ್ದಾರ್ ಶಿವಶಂಕರ್ ಮತ್ತಿತರರು ಸಹಾಯಧನದ ಚೆಕ್ ವಿತರಿಸಿದರು.

ಸಂಜೆ 4.30ಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ವಿತರಿಸಲಾಯಿತು . ಮಾಸ್ತಿಗುಡಿ ಚಿತ್ರದ ಕ್ಲೈಮಾಕ್ಸ್ ದೃಶ್ಯದ ಚಿತ್ರೀಕರಣದ ವೇಳೆ ಹೆಲಿಕಾಪ್ಟರ್ ಮೂಲಕ ನೀರಿಗೆ ಬೀಳುವ ಸಾಹಸ ದೃಶ್ಯದಲ್ಲಿ ಅಭಿನಯಿಸುತ್ತಿದ್ದ ಸಾಹಸ ಕಲಾವಿದರಾದ ಅನಿಲ್ ಮತ್ತು ಉದಯ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಮೃತರಿಗೆ ಪರಿಹಾರ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ಐದು ಲಕ್ಷ ರೂ. ಪರಿಹಾರ ನೀಡಿದ್ದಾರೆ. ಇದರ ಚೆಕ್‍ನ್ನು ಇಂದು ವಿತರಿಸಲಾಯಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin