ಮಾಸ್ತಿ ಗುಡಿ ದುರಂತ : ಡಿ. 3ರ ವರೆಗೆ ಐವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

gashekhar-Mastigudi

ರಾಮನಗರ.ನ.21: ಇಬ್ಬರು ನಟರನ್ನು ಬಲಿಪಡೆದ ಮಾಸ್ತಿ ಗುಡಿ ದುರಂತ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಚಿತ್ರದ ನಿರ್ಮಾಪಕ, ನಿರ್ದೇಶಕ, ಸಹ ನಿರ್ದೇಶಕ, ಸಾಹಸ ನಿರ್ದೇಶಕ ಹಾಗೂ ಯುನಿಟ್ ಮ್ಯಾನೇಜರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 3ರ ವರೆಗೆ ವಿಸ್ತರಿಸಲಾಗಿದೆ. ಮಾಗಡಿ ತಾಲೂಕಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ರಾಮನಗರದ 3ನೇ ಹೆಚ್ಚುವರಿ ನ್ಯಾಯಾಧೀಶ ಗೋಪಾಲಕೃಷ್ಣ ಅವರು, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದ್ದಾರೆ. ಮಾಸ್ತಿ ಗುಡಿ ದುರಂತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ, ಸಹ ನಿರ್ದೇಶಕ ಸಿದ್ದು, ನಿರ್ಮಾಪಕ ಸುಂದರ್ ಪಿ.ಗೌಡ ಹಾಗೂ ಯುನಿಟ್ ಮ್ಯಾನೇಜರ್ ಭರತ್ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಗಳನ್ನು ಜೆಎಂಎಫ್ಸಿ ಕೋರ್ಟ್ ಗೆ ಹಾಜರುಪಡಿಸಲಾಯಿತು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin