ಮಾ.11 ರಂದು ಕಾಂಗ್ರೆಸ್-ಎಸ್‍ಪಿಗೆ ಎಲೆಕ್ಟ್ರಿಕ್ ಶಾಕ್ ಹೊಡೆಯಲಿದೆ : ಪ್ರಧಾನಿ ವ್ಯಂಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

Modi--02

ಮಿರ್ಜಾಪುರ್(ಉ.ಪ್ರ), ಮಾ.4-ಈ ತಿಂಗಳ 11 ರಂದು ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಕ್ಕೆ ವಿದ್ಯುತ್ ಆಘಾತ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ. ಉತ್ತರ ಪ್ರದೇಶದ ಪೂರ್ವಭಾಗದ ಅತ್ಯಂತ ಹಿಂದುಳಿದ ಪ್ರದೇಶದಲ್ಲಿ ಇಂದು ಬೆಳಗ್ಗೆ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್, ಎಸ್‍ಪಿ ಮತ್ತು ಬಿಎಸ್‍ಪಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು.

ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಮಾ.11ರಂದು ಹೊರಬೀಳಲಿದೆ. ಆದಾದನಂತರ ಈ ಮೂರೂ ಪಕ್ಷಗಳಿಗೂ ಎಲೆಕ್ಟ್ರಿಕ್ ಶಾಕ್ ಆಗಲಿದೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದರು. ಈ ಪ್ರಾಂತ್ಯದಲ್ಲಿ ತೀವ್ರ ವಿದ್ಯುತ್ ಸಮಸ್ಯೆ ಕಾಡುತ್ತಿರುವ ಸಂದರ್ಭದಲ್ಲೇ ಮೋದಿಯವರ ಈ ಎಲೆಕ್ಟ್ರಿಕ್ ಶಾಕ್ ಹೇಳಿಕೆಯ ಟೀಕೆ ಹೊರಬಿದ್ದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin