ಮಾ.09ರಿಂದ ಪಿಯುಸಿ ಪರೀಕ್ಷೆ : ಪ್ರಶ್ನೆಪತ್ರಿಕೆಗಳಿಗೆ ಇನ್ನಿಲ್ಲದ ಭದ್ರತೆ

ಈ ಸುದ್ದಿಯನ್ನು ಶೇರ್ ಮಾಡಿ

PU-Board--01

ಬೆಂಗಳೂರು, ಮಾ.1-ಮಾ.09ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಈ ಸಂದರ್ಭದಲ್ಲಿ ಕಳೆದ ವರ್ಷದ ಕಹಿ ಘಟನೆಗಳನ್ನು ನೆನಪಿಸಿಕೊಂಡರೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆತಂಕ ಆಗೋದು ಸಹಜ. ಆದರೆ ಪಿಯು ಮಂಡಳಿ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು ಈ ಬಾರಿ ಯಾರೂ ಆತಂಕಪಡುವ ಅಗತ್ಯವಿಲ್ಲ ಅಂತಿದ್ದಾರೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಅಭಯ ನೀಡಿದ್ದಾರೆ.  ದ್ವಿತೀಯ ಪಿಯುಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಕ್ಕೆ ಸಾಕಷ್ಟು ಮುಜುಗರ ಉಂಟು ಮಾಡಿತ್ತು. ಈ ನಿಟ್ಟಿನಲ್ಲಿ ಇದೀಗ ರಾಜ್ಯ ಪದವಿ ಪೂರ್ಣ ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಸಂಗ್ರಹಣೆಗೆ ಇನ್ನಷ್ಟು ಭದ್ರತಾ ವ್ಯವಸ್ಥೆ ಕಲ್ಪಿಸಿದ್ದು, ಸ್ಟ್ರಾಂಗ್ ರೂಂಗೆ ತೆರಳುವ ಸಿಬ್ಬಂದಿಗೆ ಬಯೋಮೆಟ್ರಿಕ್ ಅಳವಡಿಸಲು ನಿರ್ಧರಿಸಿದೆ.

ಹೌದು.., ಸ್ಟ್ರಾಂಗ್ ರೂಮ್‍ಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಗೂ ಭದ್ರತಾ ಸಿಬ್ಬಂದಿಗೆ ಗುರುತಿನ ಪತ್ರ ಕೂಡಾ ವಿತರಿಸಲು ತೀರ್ಮಾನಿಸಿದೆ. ಅಲ್ಲದೇ ಹಿಂದೆಂದಿಗಿಂತ ಭಿನ್ನವಾಗಿ ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಮಾತ್ರ ಸ್ಟ್ರಾಂಗ್ ರೂಂ ನಿರ್ಮಿಸಲು ನಿರ್ಧರಿಸಲಾಗಿದೆ. ಅತಿ ದೊಡ್ಡದಾದ ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಎರಡು ಸ್ಟ್ರಾಂಗ್ ರೂಂ ಇರಲಿವೆ. ಇನ್ನು ಸ್ಟ್ರಾಂಗ್ ರೂಂ ಇರುವ ಆವರಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲು ತೀರ್ಮಾನಿಸಲಾಗಿದೆ. ಅಲ್ಲದೇ ಸ್ಟ್ರಾಂಗ್ ಒಳಗೆ ಮತ್ತು ಹೊರಗೆ ಸಿಸಿಟಿವಿ ಅಳವಡಿಸಲಾಗುತ್ತದೆ. ಇನ್ನು ಪರೀಕ್ಷಾ ವೇಳೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಕ್ಕೆ ರವಾನಿಸಲಾಗುತ್ತದೆ. ಈ ಬಾರಿ ವಾಣಿಜ್ಯ ವಿಭಾಗದಲ್ಲಿ 2,48,423 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,18,748 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ 2,17,075 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ರಾಜ್ಯದಾದ್ಯಂತ ಒಟ್ಟು 998 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ದಕ್ಷಿಣ ಕನ್ನಡ ಮತ್ತು ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದ್ರೆ 79 ಹಾಗೂ ಅತಿ ಕಡಿಮೆ ಅಂದ್ರೆ 12 ಪರೀಕ್ಷಾ ಕೇಂದ್ರಗಳು ರಾಮನಗರದಲ್ಲಿ ಕಾರ್ಯನಿರ್ವಹಿಸಲಿವೆ.  ಅಲ್ಲದೇ ಸಾಮೂಹಿಕ ನಕಲು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸೆಕ್ಯೂರ ಎಕ್ಸಾಮಿನೇಶನ ಸಿಸ್ಟಮ್ ಪ್ರಕಾರ ಅದೇ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅದೇ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವಂತಿಲ್ಲ ಎಂಬ ನಿಯಮ ರೂಪಿಸಲಾಗಿದೆ ಅಂತಾರೇ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ. ಶಿಖಾ.

ಇನ್ನು ಈ ಬಾರಿ ಯಾವುದೇ ವೈಫಲ್ಯಗಳಿಲ್ಲದೇ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಸಾಕಷ್ಟು ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿದೆ. ಪದವಿ ಪೂರ್ಣ ಶಿಕ್ಷಣ ಇಲಾಖೆ ತನ್ನ ಪ್ರಯತ್ನದಲ್ಲಿ ಸಫಲವಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin