ಮುಂಗಾರು ಹಂಗಾಮಿಗೆ 262.20 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ
ಬೆಂಗಳೂರು, ಮೇ 6-ಕಳೆದ ವರ್ಷದ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 262.20ಕೋಟಿ ರೂ. ಗಳ ಇನ್ಪುಟ್ ಸಬ್ಸಿಡಿಯನ್ನು ರೈತರಿಗೆ ಇಂದು ಬಿಡುಗಡೆ ಮಾಡಿದೆ. ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಇನ್ಪುಟ್ ಸಬ್ಸಿಡಿ ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಚಾಲನೆ ನೀಡಿದರು. ಪರಿಹಾರ ತಂತ್ರಾಂಶದ ಮೂಲಕ ಇನ್ಪುಟ್ ಸಬ್ಸಿಡಿಯನ್ನು ರೈತರಿಗೆ ನೇರವಾಗಿ ಬಿಡುಗಡೆ ಮಾಡಲಾಗುತ್ತಿದೆ.ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ 2,94,209 ರೈತರಿಗೆ 168.4 ಕೋಟಿ ರೂ. ಹಿಂಗಾರು ಹಂಗಾಮಿಗೆ ಸಂಬಂಧಿಸಿದಂತೆ 1,82270 ಕೋಟಿ ರೂ. ರೈತರಿಗೆ ನೀಡಲಾಗಿದೆ. 93.87 ಕೋಟಿ ರೂ.ಗಳ ಸಬ್ಸಿಡಿ ಬಿಡುಗಡೆಯಾಗಿದೆ.
ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಉಂಟಾಗಿದ್ದ ಬೆಳೆ ನಷ್ಟಕ್ಕೂ ಪರಿಹಾರ ವಿತರಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ 19.45 ಲಕ್ಷ ರೈತರಿಗೆ 1104.6 ಕೋಟಿ ರೂ.ಗಳ ಸಬ್ಸಿಡಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS