ಮುಂದಿನ ಚುನಾವಣೆಗೆ ಮೈತ್ರಿ ಕುರಿತಂತೆ ಪ್ರಸ್ತಾಪವಾಗಿಲ್ಲ : ಪರಂ

ಈ ಸುದ್ದಿಯನ್ನು ಶೇರ್ ಮಾಡಿ

parameshwa-r

ಬೆಂಗಳೂರು, ಏ.18– ಮುಂಬರುವ 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ವಿಚಾರದ ಕುರಿತಂತೆ ಯಾವುದೇ ಪ್ರಸ್ತಾಪವಾಗಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ವಿಚಾರದ ಬಗ್ಗೆ ಪ್ರಸ್ತಾಪವಾಗಿಲ್ಲ. ಇದರ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ನಾವು ಯಾರೊಂದಿಗೂ ಅಧಿಕಾರಕ್ಕಾಗಿ ಹಿಂದೆ ಹೋಗುವುದಿಲ್ಲ. ಬಿಜೆಪಿಯನ್ನು ಅಧಿಕಾರಕ್ಕೆ ಬರದಂತೆ ತಡೆಯಲಾಗುವುದು ಎಂದು ಹೇಳಿದರು.



ಮುಂದಿನ ವಿಧಾನಸಭೆ ಚುನಾವಣೆಯನ್ನು ಯಾವ ರೀತಿ ಎದುರಿಸಬೇಕು, ಯಾರ ನೇತೃತ್ವದಲ್ಲಿ ಎದುರಿಸಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ. 2018ರ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಜಯ ಗಳಿಸಿ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.  ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಬಗ್ಗೆ ಗೊಂದಲ ಬೇಡ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸಚಿವ ಸಂಪುಟ ವಿಸ್ತರಣೆ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin