ಮುಂದಿನ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರ ಬಳಕೆಗೆ ಸಚಿವ ಎಚ್.ಎಂ.ರೇವಣ್ಣ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

Revanna-HM

ಬೆಂಗಳೂರು, ಡಿ.15- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಾಗಿ ಮತಪತ್ರಗಳನ್ನು ಬಳಸುವಂತೆ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಈಗಾಗಲೇ ಇವಿಎಂಗಳ ಬಗ್ಗೆ ನಕಾರಾತ್ಮಕ ಚರ್ಚೆಗಳು ನಡೆಯುತ್ತಿರುವುದರಿಂದ ಮತಪತ್ರಗಳು ನಂಬಿಕೆಗೆ ಅರ್ಹವಾಗಿವೆ ಎಂದು ತಿಳಿಸಿದರು.
ಈ ಸಂಬಂಧ ಫೇಸ್‍ಬುಕ್‍ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಚಿವರು, ನೂತನ ತಂತ್ರಜ್ಞಾನ, ಕ್ಯಾಮೆರಾ, ಗೂಗಲ್ ಮ್ಯಾಪ್ ಮೊದಲಾದ ತಂತ್ರಜ್ಞಾನ ಬಳಸಿಕೊಂಡು ಹಳೆಯ ಪದ್ಧತಿಯಾದ ಮತಪತ್ರಗಳನ್ನು ಬಳಸಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವಂತೆ ಆಗ್ರಹಿಸಿದ್ದಾರೆ.

Facebook Comments

Sri Raghav

Admin