ಮುಂದಿನ ಚುನಾವಣೆಯಲ್ಲಿ ಜೆಡಿಎಸ್‍ ಅಧಿಕಾರಕ್ಕೇರಲಿದೆ : ಗೌಡರ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

Devegowda-a

ಚಿಕ್ಕಮಗಳೂರು, ಸೆ.8- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಭವಿಷ್ಯ ನುಡಿದಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವ ವಹಿಸಿಕೊಂಡಿರುವ ಜೆಡಿಎಸ್‍ಗೆ ಉತ್ತಮ ಭವಿಷ್ಯವಿದೆ. ಜೆಡಿಎಸ್‍ಗೆ ಮೈಸೂರು ಭಾಗದಲ್ಲಿ ಮಾತ್ರ ಪ್ರಭಾವವಿದೆ ಎಂದು ಹೇಳುವವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದೇವೆ. ಕುಮಾರಸ್ವಾಮಿಯನ್ನು ಉತ್ತರ ಕರ್ನಾಟಕ ಭಾಗದ ಹಾಗೂ ಜಾತಿ ವಿರೋಧಿ ಎಂಬಂತೆ ಕೆಲವರು ಬಿಂಬಿಸುತ್ತಿದ್ದಾರೆ. ಆದರೆ, ಆ ಭಾಗದಲ್ಲಿ ಕುಮಾರಸ್ವಾಮಿಯವರ ಜನಪರ ಕೆಲಸಗಳನ್ನು ಮನಗಂಡಿರುವವರಿಗೆ ಸತ್ಯದ ಅರಿವಾಗಿ ಸ್ಮರಿಸಿಕೊಳ್ಳುತ್ತಾರೆ ಎಂದು ಹೇಳಿದರು.

ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಈಗಿನಿಂದಲೇ ಮುಂಬರುವ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟಿಸಬೇಕಿದೆ. ಕಾಂಗ್ರೆಸ್‍ನ ಜನವಿರೋಧಿ ನೀತಿಯಿಂದಾಗಿ ಜೆಡಿಎಸ್ ಸೇರಲು ಬಯಸುತ್ತಿದ್ದಾರೆಂದು ತಿಳಿಸಿದರು. ಪಕ್ಷ ವಿರೋಧಿ ಚಟುವಟಿಕೆಗಳನ್ನು ನಾನು ಸಹಿಸುವುದಿಲ್ಲ. ಈಗಾಗಲೇ ಕೆಲ ಶಾಸಕರನ್ನು ಅಮಾನತುಗೊಳಿಸಲಾಗಿದೆ. ಅವರಿಗೆ ಶಿಸ್ತು ಕ್ರಮಕ್ಕೂ ನೋಟೀಸ್ ಜಾರಿಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬಿಬಿಎಂಪಿ:
ಬಿಬಿಎಂಪಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‍ನ ಕಾಪೆರ್Çರೇಟರ್‍ಗಳು ತಪ್ಪು ಮಾಡಿದ್ದಾರೆ. ಬೆಂಗಳೂರಿನಲ್ಲಿ ಜನತೆಯ ಮೂಲ ಸಮಸ್ಯೆಗಳನ್ನು ಬಗೆ ಹರಿಸುವ ಉದ್ದೇಶದಿಂದ ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬರಲು ಪಕ್ಷಾತೀತವಾಗಿ ಶಾಸಕರು ಹಾಗೂ ಮುಖಂಡರ ಜತೆ ಚರ್ಚಿಸಿದ್ದೇನೆ ಎಂದು ಹೇಳಿದರು.

ಕಾಶ್ಮೀರ ಗಲಭೆ:
ಕಾಶ್ಮೀರದಲ್ಲಿ ಉಂಟಾಗಿರುವ ಹಿಂಸಾತ್ಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರಿಗೆ ನನ್ನ ಸಲಹೆ ನೀಡಿದ್ದೇನೆ. ಅಲ್ಲಿನ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ ನಂತರ ನಾಯಕರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿರುವುದಾಗಿ ತಿಳಿಸಿದರು.

ನಾರಿಮನ್ ಭೇಟಿ:
ಶುಕ್ರವಾರ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಲಿದ್ದೇನೆ. ಇದಕ್ಕೂ ಮುನ್ನ ರಾಜ್ಯ ಪ್ರತಿನಿಧಿಸುತ್ತಿರುವ ವಕೀಲ ನಾರಿಮನ್ ಅವರನ್ನು ಭೇಟಿ ಮಾಡಿ ವಸ್ತು ಸ್ಥಿತಿ ಬಗ್ಗೆ ತಿಳಿಸಿ ಪ್ರಧಾನಿ ಅವರ ಗಮನಕ್ಕೆ ತರುವ ವಿಚಾರವನ್ನು ಚರ್ಚಿಸಲಿದ್ದೇನೆ ಎಂದು ಹೇಳಿದರು.

► Follow us on –  Facebook / Twitter  / Google+

Facebook Comments

Sri Raghav

Admin