ಮುಂಬರುವ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಕನ್ನಡದ ಕಟ್ಟಾಳುಗಳು..!

ಈ ಸುದ್ದಿಯನ್ನು ಶೇರ್ ಮಾಡಿ

Vatal--011

ಬೆಂಗಳೂರು, ಸೆ.26- ಮುಂಬರುವ 2018ರ ವಿಧಾನಸಭೆ ಚುನಾವಣೆಗೆ ಕನ್ನಡ ಒಕ್ಕೂಟದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದಿಲ್ಲಿ ಹೇಳಿದರು. ಬೆಂಗಳೂರಿನ ಪುರಭವನದಲ್ಲಿ ವಾಟಾಳ್ ನಾಗರಾಜ್ ಅವರಿಗೆ ಬೂಟ್ಸ್‍ಏಟು ಎಂಬ ವಿನೂತನ ಕಾರ್ಯಕ್ರಮದ ಮೂಲಕ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡು ಮಾತನಾಡಿದ ಅವರು, ಯಾವ ರಾಜಕೀಯ ಪಕ್ಷಗಳೂ ಕನ್ನಡ ಪಕ್ಷಗಳಾಗಿ ಉಳಿದಿಲ್ಲ. ಕನ್ನಡ ಭಾಷೆ, ನೆಲ, ಜಲ, ಸಂಸ್ಕøತಿಯ ಬಗ್ಗೆ ಕಾಳಜಿ ವ್ಯಕ್ತಪಡಿಸಿಲ್ಲ ಎಂದು ಗಂಭೀರ ಆರೋಪ ಮಾಡಿದರು.

Vatal--032

ಕಾವೇರಿ, ಮಹದಾಯಿ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು, ಕನ್ನಡ ಚಲನಚಿತ್ರಗಳಿಗೆ ಆದ್ಯತೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕನ್ನಡ ಒಕ್ಕೂಟ ನಿರಂತರ ಹೋರಾಟ ಮಾಡುತ್ತ ಬಂದಿದೆ. ನಮ್ಮ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ. ಅದಕ್ಕಾಗಿ ಮುಂಬರುವ ಚುನಾವಣೆಯಲ್ಲಿ ನಾವು ನೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದು ಅವರು ಹೇಳಿದರು.
ಚಿತ್ರಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಕಡ್ಡಾಯಗಳಿಸಬೇಕೆಂದು ಪರದೆಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು ಬಂಧಿಸಿ ಬೂಟ್ಸ್ ಏಟು ಹೊಡೆದರು. ಅದನ್ನೇ ನನ್ನ ಹುಟ್ಟುಹಬ್ಬವೆಂದು ಇಂದಿನವರೆಗೂ ಆಚರಿಸಿಕೊಂಡು ಬಂದಿದ್ದೇನೆ. ನಾಡು-ನುಡಿಗಾಗಿ ನಿರಂತರ ಹೋರಾಟ ಮಾಡುತ್ತೇನೆ ಎಂದು ಅವರು ಹೇಳಿದರು.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ, ಕನ್ನಡ ಸೇನೆಯ ಕೆ.ಆರ್.ಕುಮಾರ್, ಶಿವರಾಮೇಗೌಡ, ಪ್ರವೀಣ್‍ಕುಮಾರ್ ಶೆಟ್ಟಿ, ಮಂಜುನಾಥ್ ದೇವ್, ಎಚ್.ವಿ.ಗಿರೀಶ್‍ಗೌಡ, ಟಿ.ಪಿ.ಪ್ರಸನ್ನಕುಮಾರ್, ಜಿ.ಮುದ್ದೇಗೌಡ ಮತ್ತಿತರರಿದ್ದರು.

Facebook Comments

Sri Raghav

Admin