ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ : ಜಿ.ಎಸ್.ಬಸವರಾಜು

ಈ ಸುದ್ದಿಯನ್ನು ಶೇರ್ ಮಾಡಿ

Basavaraju--01

ತುಮಕೂರು, ಜೂ.3- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಂಸದ ಜಿ.ಎಸ್.ಬಸವರಾಜು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ನನಗೆ ಸುಮಾರು 50 ವರ್ಷಗಳ ಅನುಭವವಿದ್ದು, ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಸಕ್ರಿಯ ರಾಜಕಾರಣದಲ್ಲೇ ಇರುತ್ತೇನೆ ಎಂದರು.  ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್ ಇಂತಹವರಿಗೇ ಟಿಕೆಟ್ ನೀಡಲಿ ಎಂದು ಹೇಳುವುದಿಲ್ಲ. ಟಿಕೆಟ್ ಕೊಡುವ ವಿಚಾರ ಪಕ್ಷಕ್ಕೆ ಬಿಟ್ಟದ್ದು ಎಂದು ಹೇಳಿದರು.



ನನ್ನ ಪುತ್ರ ಜ್ಯೋತಿ ಗಣೇಶ್ ಬಿಜೆಪಿಯಲ್ಲಿ ಸಕ್ರಿಯ ಯುವ ರಾಜಕಾರಣಿಯಾಗಿದ್ದಾರೆ. ಅವರಿಗೆ ಟಿಕೆಟ್ ನೀಡುವಂತೆ ನಾನು ಕೇಳುವುದಿಲ್ಲ. ಈ ಬಗ್ಗೆ ಪಕ್ಷದ ತೀರ್ಮಾನವೇ ಅಂತಿಮ ಎಂದರು.  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗೋ ಹತ್ಯೆ ನಿಷೇಧ ಸ್ವಾಗತಾರ್ಹ. ಪುರಾತನ ಕಾಲದಿಂದಲೂ ಗೋವುಗಳನ್ನು ಪೂಜೆ ಮಾಡಲಾಗುತ್ತಿದೆ. ಅಂತಹ ಗೋವುಗಳನ್ನು ಹತ್ಯೆ ಮಾಡದಂತೆ ಪ್ರಧಾನಿ ದಿಟ್ಟ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin