ಮುಂಬೈನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಗೆ 40,000 ಪೊಲೀಸರ ಪಹರೆ

ಈ ಸುದ್ದಿಯನ್ನು ಶೇರ್ ಮಾಡಿ

Ganesh--01

ಮುಂಬೈ, ಸೆ.5-ದೇಶದಲ್ಲೇ ಅತ್ಯಂತ ವಿಶಿಷ್ಟ ರೀತಿಯಲ್ಲಿ ಗಣೇಶೋತ್ಸವಗಳನ್ನು ಆಚರಿಸುವ ಮುಂಬೈನಲ್ಲಿ ಇಂದು ಸಾಮೂಹಿಕವಾಗಿ ಮಂಗಳಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ವಾಣಿಜ್ಯ ನಗರಿಯ 119 ಸೂಕ್ಷ್ಮ ಪ್ರದೇಶಗಳಲ್ಲಿ 40,000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ರಸ್ತೆಗಳಲ್ಲಿ ಪೊಲೀಸ್ ಪಹರೆ ಮತ್ತು ಗಸ್ತು ಹೆಚ್ಚಿಸಲಾಗಿದೆ.

ಮುಂಬೈನ ವಿವಿಧ ಪ್ರದೇಶಗಳಲ್ಲಿ ಅದ್ದೂರಿಯಾಗಿ ನಡೆದ ವಿನಾಯಕ ಮಹೋತ್ಸವ ಇಂದು ಕೊನೆಗೊಳ್ಳಲಿದ್ದು, ವಿಸರ್ಜನೆ ಸಂದರ್ಭದಲ್ಲಿ ಭಾರೀ ಸಂಖ್ಯೆ ಭಕ್ತರು ಸೇರುವುದರಿಂದ ಯಾವುದೇ ಸಮಸ್ಯೆಗಳು ತಲೆದೋರದಂತೆ ಪೊಲೀಸ್ ಇಲಾಖೆ ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.  ಗಣಪತಿ ವಿಸರ್ಜನೆ ಮೆರವಣಿಗೆ ಸಾಗುವ 53 ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದ್ದು, ಇತರ 54 ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ.

ಸ್ಥಳೀಯ ಪೊಲೀಸರೊಂದಿಗೆ ಅರೆ ಸೇನಾಪಡೆ ನೆರವನ್ನೂ ಪಡೆಯಲಾಗಿದೆ. ಸುರಕ್ಷತೆ ಮತ್ತು ಭದ್ರತಾ ದೃಷ್ಟಿಯಿಂದ 5,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದು, ಅಗತ್ಯವಿದ್ದರೆ ಡ್ರೋನ್‍ಗಳ ಕಣ್ಗಾವಲು ಹಾಕುವುದಾಗಿ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin