ಮುಂಬೈ ದಾಳಿ ಸೂತ್ರಧಾರ ಉಗ್ರ ಸಯೀದ್ ವಿರುದ್ಧ ಭಾರತದ ದಿಟ್ಟ ಹೆಜ್ಜೆ

ಈ ಸುದ್ದಿಯನ್ನು ಶೇರ್ ಮಾಡಿ

Hafiz

ನವದೆಹಲಿ, ಫೆ.20-ಮುಂಬೈ ಭಯೋತ್ಪಾದಕ ದಾಳಿಯ ಸೂತ್ರಧಾರ ಹಫೀಜ್ ಸಯೀದ್ ವಿರುದ್ಧ ಕ್ರಮ ಕೈಗೊಂಡು ಕಾನೂನು ಕುಣಿಕೆಯನ್ನು ಬಿಗಿಗೊಳಿಸಲು ಭಾರತ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.  ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಫೀಜ್ ಸಯೀದ್ ಅಂತಾರಾಷ್ಟ್ರೀಯ ಭಯೋತ್ಪಾದಕ. ಮುಂಬೈ ದಾಳಿಯ ಪ್ರಮುಖ ಸೂತ್ರಧಾರಿ. ಭಾರತದ ವಿರುದ್ಧ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದ್ದಾನೆ. ಸಯೀದ್ ಮತ್ತು ಸಹಚರರ ವಿರುದ್ಧ ನಾವು ಕೈಗೊಂಡಿರುವ ದಿಟ್ಟ ಹೆಜ್ಜೆಯಿಂದಾಗಿ ಆತ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಆತನನ್ನು ಭಯೋತ್ಪಾದಕನ ಪಟ್ಟಿಗೆ ಸೇರ್ಪಡೆ ಮಾಡಲು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಪ್ರಯತ್ನಗಳು ಫಲ ನೀಡುತ್ತಿವೆ. ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದ ಇವೆರಡರ ಮೂಲಕ ಏಷ್ಯಾಗೆ ಕಂಟಕವಾಗಿರುವ ಅತನ ವಿರುದ್ಧ ನಮ್ಮ ಪ್ರಯತ್ನಗಳು ನಿರರ್ಥಕವಾಗುವುದಿಲ್ಲ ಎಂದು ಅವರು ಹೇಳಿದ್ಧಾರೆ.   ಪ್ರಸ್ತುತ ಜಮಾನ್ ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಗೃಹ ಬಂಧನದಲ್ಲಿದ್ದು, ಇವನನ್ನು ಭಯೋತ್ಪಾದಕರ ಪಟ್ಟಿಗೂ ಸೇರಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin