ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಮತ್ತೆ ಅಪಸ್ವರ

ಈ ಸುದ್ದಿಯನ್ನು ಶೇರ್ ಮಾಡಿ

Anila-Bhagya--01
ನವದೆಹಲಿ/ಬೆಂಗಳೂರು, ಮಾ.3-ರಾಜ್ಯ ಸರ್ಕಾರದ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ(ಎಂಎಂಎಬಿವೈ) ಬಗ್ಗೆ ಕೇಂದ್ರ ಸರ್ಕಾರ ಮತ್ತೆ ಅಪಸ್ವರ ಎತ್ತಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ನೀಡಿದ್ದ ಸಲಹೆ ಮತ್ತು ಸೂಚನೆಗಳನ್ನು ಪಾಲಿಸಿಲ್ಲ ಹಾಗೂ ಅಗತ್ಯವಾದ ವಿಧಾನಗಳನ್ನು ಅನುಸರಿಸಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಸಚಿವಾಲಯವು ಕೇಂದ್ರ ಸರ್ಕಾರದ ಸಹಭಾಗಿತ್ವದೊಂದಿಗೆ ರಾಜ್ಯವು ಎಂಎಂಎಬಿವೈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ ಎಂಬ ಜಾಹೀರಾತುಗಳು ತನ್ನ ಗಮನಕ್ಕೆ ಬಂದಿದೆ. ರಾಜ್ಯ ಸರ್ಕಾರವು ಈ ಹಿಂದೆ ಯೋಜನೆ ಅನುಮೋದನೆಗಾಗಿ ಸಚಿವಾಲಯಕ್ಕೆ ಮನವಿ ಸಲ್ಲಿಸಿತ್ತು. ಪ್ರಧಾನಮಂತ್ರಿಯವರ ಉಜ್ವಲ ಯೋಜನೆ(ಪಿಎಂಯುವೈ)ಗೆ ಪೂರಕವಾಗಿ ಅನಿಲ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಸಲಹೆ ನೀಡಿತ್ತು. ಒಎಂಸಿ ಮೂಲಕ ಮಾತ್ರವೇ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಪದೇ ಪದೇ ತಿಳಿಸಲಾಗಿತ್ತು. ಆದರೆ ರಾಜ್ಯ ಸರ್ಕಾರ ಈ ಸಲಹೆಯನ್ನು ಪಾಲಿಸಿಲ್ಲ ಎಂದು ಹೇಳಿದೆ.

ಸಚಿವಾಲಯದ ಪುನರಾವರ್ತಿತ ಸಲಹೆಗಳನ್ನು ಕಡೆಗಣಿಸಿ ರಾಜ್ಯ ಸರ್ಕಾರವು ಏಕಪಕ್ಷೀಯವಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾರ್ಯೋನ್ಮುಖವಾಗಿದೆ ಒಎಂಸಿಯನ್ನು ಒಳಪಡಿಸದೇ ವಿತರಕರ ಜಾಲದ ಮೂಲಕ ನೇರವಾಗಿ ಯೋಜನೆ ಕಾರ್ಯಗತಗೊಳಿಸುತ್ತಿದೆ. ಈ ಹಿಂದೆ ಸಚಿವಾಲಯ ಮತ್ತು ರಾಜ್ಯ ಸರ್ಕಾರದ ನಡುವೆ ನಡೆದ ಮಾತುಕತೆ ಸಮ್ಮತಿಯನ್ನು ಕಡೆಗಣಿಸಿದೆ. ಹೀಗಾಗಿ ಈ ಯೋಜನೆಯ ಕೇಂದ್ರ ಸರ್ಕಾರದ ವಿಧಾನದಂತೆ ಇಲ್ಲ. ಆದಕಾರಣ ಅನಿಲ ಭಾಗ್ಯ ಯೋಜನೆಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin