ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

Devegowda-Siddaramaiaha

ನವದೆಹಲಿ, ಫೆ.23- ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದರೂ ಸಮಸ್ಯೆ ನಿವಾರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‍ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೋರಾಗಿ  ಮಾತನಾಡುತ್ತಾರೆಯೇ ಹೊರತು ಕುಡಿಯುವ ನೀರಿನ ಪೂರೈಕೆ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು. ಇದೇ ರೀತಿ ಉದಾಸೀನ ಧೋರಣೆ ಮುಂದುವರೆದರೆ ತಾವು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಧರಣಿ ಕೂರಬೇಕಾಗುತ್ತದೆ ಎಂದರು. ಮುಖ್ಯಮಂತ್ರಿಗೆ ಅಧಿಕಾರಿಗಳ ಮೇಲೆ ಹಿಡಿತವಿಲ್ಲ.

ಕುಡಿಯುವ ನೀರಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಆದರೆ, ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಆಸಕ್ತಿವಹಿಸಿಲ್ಲ. ಹಾಸನದ ಹತ್ತು ವಾರ್ಡ್‍ಗಳಲ್ಲಿ ಕುಡಿಯಲು ನೀರಿಲ್ಲದೆ ಜನ ಪರದಾಡುತ್ತಿದ್ದರೂ ಅಧಿಕಾರಿಗಳು ಉದಾಸೀನ ತೋರಿದ್ದಾರೆ. ತುರ್ತಾಗಿ ನೀರು ಪೂರೈಸದಿದ್ದರೆ ಇದೇ 25ರಂದು ಉಪವಾಸ ಧರಣಿ ಕೂರುವುದಾಗಿ ಹೇಳಿದರು.
ಯಗಚಿ ಜಲಾಶಯದ ಕುಡಿಯುವ ನೀರಿನ ವಿಚಾರದಲ್ಲಿ ಅಧಿಕಾರಿಗಳು ಗೊಂದಲ ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿಗೆ ಮನವಿ:

ಶ್ರವಣಬೆಳಗೊಳದ ಗೊಮಟೇಶ್ವರ ಮೂರ್ತಿಗೆ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುವುದಾಗಿ ಗೌಡರು ತಿಳಿಸಿದರು. ಮಹಾಮಸ್ತಕಾಭಿಷೇಕದ ಸಿದ್ದತೆ ಹಾಸನ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ. ರಸ್ತೆ ನಿರ್ಮಾಣ, ರೈಲ್ವೆ ಮಾರ್ಗಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದಾಗಿ ಗೌಡರು ತಿಳಿಸಿದರು.  ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿದ್ದು, ಕೊಬ್ಬರಿ ಹಾಗೂ ತೆಂಗಿನ ಕಾಯಿಗೆ ಬೆಂಬಲ ಘೋಷಿಸುವಂತೆ ಮತ್ತೊಮ್ಮೆ ಮನವಿ ಮಾಡಿರುವುದಾಗಿ ದೇವೇಗೌಡರು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin