ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ‘ರಾಜಕುಮಾರ’

ಈ ಸುದ್ದಿಯನ್ನು ಶೇರ್ ಮಾಡಿ

Punith--01

ಬೆಂಗಳೂರು. ಏ. 10 : ನಿನ್ನೆ ‘ರಾಜಕುಮಾರ’ ಚಿತ್ರ ವೀಕ್ಷಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಇಂದು ನಟ ಪುನೀತ್ ರಾಜ್ಕುಮಾರ್ ಅವರು ಭೇಟಿಮಾಡಿದರು. ನಿನ್ನೆ ‘ರಾಜಕುಮಾರ’ ಚಿತ್ರ ವೀಕ್ಷಿಸಿದ್ದ ಸಿದ್ದರಾಮಯ್ಯ ಇಂದು ತಮ್ಮ ನಿವಾಸ ‘ಕಾವೇರಿ’ಗೆ ಪುನೀತ್ ರಾಜಕುಮಾರ್ ಅವರನ್ನು ಕರೆಸಿಕೊಂಡು ಮಾತನಾಡಿದ್ದಾರೆ. ಚಿತ್ರ ಚೆನ್ನಾಗಿದೆ ಎಂದು ಮನಸಾರೆ ಪ್ರಶಂಸಿಸಿದ ಮುಖ್ಯಮಂತ್ರಿಗಳು, ಅಪ್ಪು ಅಭಿನಯವನ್ನೂ ಮೆಚ್ಚಿಕೊಂಡಿದ್ದಾರೆ.

ಮೈಸೂರಿನ ಬಿ.ಎಂ. ಹ್ಯಾಬಿಟೇಟ್ ಮಾಲ್ ನ ಡಿ.ಆರ್.ಸಿ. ಚಿತ್ರಮಂದಿರದಲ್ಲಿ ಅವರು ಪ್ರೇಕ್ಷಕರೊಂದಿಗೆ ಚಿತ್ರ ವೀಕ್ಷಿಸಿ, ಚೆನ್ನಾಗಿದೆ ಎಂದು ಹೇಳಿದ್ದರು. ಇಂದು ಮುಖ್ಯಮಂತ್ರಿಗಳ ನಿವಾಸ ‘ಕಾವೇರಿ’ಗೆ ಚಿತ್ರದ ನಾಯಕ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಿರ್ದೇಶಕ ಸಂತೋಷ್, ನಿರ್ಮಾಪಕ ವಿಜಯ್ ಅವರನ್ನು ಕರೆಸಿಕೊಂಡ ಸಿ.ಎಂ. ಅಭಿನಂದಿಸಿದ್ದಾರೆ. ಸಿ.ಎಂ. ಭೇಟಿಯ ಬಳಿಕ ಮಾತನಾಡಿದ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಯವರು ನಮ್ಮ ಕುಟುಂಬದೊಂದಿಗೆ ಮೊದಲಿನಿಂದಲೂ ಬಾಂಧವ್ಯ ಹೊಂದಿದ್ದಾರೆ. ‘ರಾಜಕುಮಾರ’ ಸಿನಿಮಾ ವೀಕ್ಷಿಸಿದ್ದು, ಖುಷಿ ತಂದಿದೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin