ಮುರಿದು ಬಿದ್ದ ಮರ : ಮಹಿಳೆ ಪಾರು

ಈ ಸುದ್ದಿಯನ್ನು ಶೇರ್ ಮಾಡಿ

mysore

ಮೈಸೂರು, ಆ.29- ವೀಕೆಂಡ್ ಮುಗಿಸಿಕೊಂಡು ವಾರದ ಮೊದಲ ದಿನ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ದಿಢೀರನೆ ಮರ ಬಿದ್ದ ಪರಿಣಾಮ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಾನಂದವಾಡಿ ರಸ್ತೆಯಲ್ಲಿರುವ ಎನ್‍ಐಸಿ ಕಾಲೇಜು ಹಿಂಭಾಗದ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.ಸೌಮ್ಯ ಎಂಬುವವರು ಮರ ಬಿದ್ದು ಗಾಯಗೊಂಡ ಮಹಿಳೆ.ಇಂದು ಬೆಳಗ್ಗೆ ಕೆಲಸಕ್ಕೆ ಎಂದು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಇದ್ದಕ್ಕಿದ್ದಂತೆ ಮರವೊಂದು ಮುರಿದು ಬೈಕ್ ಮೇಲೆ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಮರ ಬಿದ್ದಿರುವ ಪರಿ ನೋಡಿದರೆ ದೊಡ್ಡ ಅನಾಹುತವೇ ಸಂಭವಿಸಬೇಕಿತ್ತು. ಕೇವಲ ಸಣ್ಣ ಪುಟ್ಟ ಗಾಯಗಳಾಗಿರುವುದು ಅವರ ಅದೃಷ್ಟವಲ್ಲವೇ. ಸುದ್ದಿ ತಿಳಿದ ಕೂಡಲೇ ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕೂಡಲೇ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

 

► Follow us on –  Facebook / Twitter  / Google+

Facebook Comments

Sri Raghav

Admin