ಮುಳುಗುತ್ತಿರುವ ಕಾಂಗ್ರೆಸ್ ಹಡಗಿಗೆ ಬಿಜೆಪಿಯಿಂದ ಯಾರೂ ಹೋಗುವುದಿಲ್ಲ : ಯಡಿಯೂರಪ್ಪ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa

ಮೈಸೂರು, ಮಾ.19-ಕಾಂಗ್ರೆಸ್ ಈಗಾಗಲೇ ಮುಳುಗುತ್ತಿರುವ ಹಡಗು. ಹಾಗಾಗಿ ಆ ಹಡಗಿಗೆ ಬಿಜೆಪಿಯಿಂದ ಯಾರೂ ಹೋಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್‍ಗೆ ರಾಜ್ಯದ ಜನ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ.   ಅದು ಮುಳುಗುತ್ತಿರುವ ಹಡಗು. ಆದರೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಮ್ಮ ಪಕ್ಷದ 20 ಶಾಸಕರು ಕಾಂಗ್ರೆಸ್‍ಗೆ ಬರುತ್ತಾರೆ ಎಂದು ಹೇಳಿರುವುದು ಹಾಸ್ಯಾಸ್ಪದ. ಕಂಡು ಕಂಡೂ ಮುಳುಗುವ ಹಡಗಿಗೆ ಯಾರು ಹತ್ತುತ್ತಾರೆ ಎಂದು ಮಾರ್ಮಿಕವಾಗಿ ನುಡಿದರು.

ಗುಂಡ್ಲುಪೇಟೆ-ನಂಜನಗೂಡು ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಬಿಎಸ್‍ವೈ ಆರೋಪಿಸಿದರು.
ಅಧಿಕಾರಿಗಳೇ ಕಾಂಗ್ರೆಸ್‍ನೊಂದಿಗೆ ಶಾಮೀಲಾಗುವ ಮೂಲಕ ಅಧಿಕಾರ ದುರುಪಯೋಗವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದರು.  ನಂಜನಗೂಡು-ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವು ನಿಶ್ಚಿತ. ಇದನ್ನು ಅರಿತಿರುವುದರಿಂದ ಕಾಂಗ್ರೆಸ್ ನಾಯಕರಿಗೆ ನಡುಕ ಉಂಟಾಗಿದೆ. ಹಾಗಾಗಿ ಹತಾಶರಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin