ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಶುಭಾಷಯ ಕೋರಿದ ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

idmiladh

ನವದೆಹಲಿ, ಡಿ.12-ಈದ್-ಎ-ಮಿಲಾದ್-ಉನ್-ನಬಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಮುಸ್ಲಿಂ ಸಮುದಾಯದವರಿಗೆ ಶುಭ ಕೋರಿದ್ದಾರೆ. ಈ ಹಬ್ಬವು ಸಮಾಜದಲ್ಲಿ ಸೌಹಾರ್ದತೆ ಮತ್ತು ಏಕತೆಯನ್ನು ಮತ್ತಷ್ಟು ಬಲಗೊಳಿಸಲಿ ಹಾಗೂ ಸದಾ ಶಾಂತಿ-ನೆಮ್ಮದಿ ತರಲೆಂದು ಅವರು ಟ್ವೀಟ್ ಮಾಡಿದ್ದಾರೆ. ಪ್ರವಾದಿ ಮಹಮದ್ ಪೈಗಂಬರ್ ಅವರ ಜನ್ಮದಿನವನ್ನು ಮುಸ್ಲಿಮರು ಈದ್-ಮಿಲಾದ್ ಆಗಿ ದೇಶದೆಲ್ಲೆಡೆ ಸಂಭ್ರಮದಿಂದ ಅಚರಿಸುತ್ತಿದ್ದಾರೆ. ಪ್ರಾರ್ಥನಾ ಮಂದಿರಗಳು ಮತ್ತು ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳನ್ನು ಸಲ್ಲಿಸಿ ಪರಸ್ಪರ ಶುಭ ಕೋರಿದರು. ಇದು ಮುಸ್ಲಿಂ ಸಮುದಾಯಕ್ಕೆ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿದೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin