ಮುಸ್ಲಿಂ ವೋಟ್‍ಗಾಗಿ ಸರ್ಕಾರ ಆರೋಪಿಗಳನ್ನು ರಕ್ಷಣೆ ಮಾಡುತ್ತಿದೆ : ಮುತಾಲಿಕ್

ಈ ಸುದ್ದಿಯನ್ನು ಶೇರ್ ಮಾಡಿ

Pramod-Muthalik

ಶಿವಮೊಗ್ಗ, ನ.22- ಮುಸ್ಲಿಂ ವೋಟ್‍ಗಾಗಿ ಸರ್ಕಾರ ಹಿಂದೂ ಯುವತಿಯರ ಮೇಲೆ ಅತ್ಯಾಚಾರ ಪ್ರಕರಣಗಳನ್ನು ಮುಚ್ಚಿ ಹಾಕುವಂತಹ ಕೆಲಸ ಮಾಡುತ್ತಿದೆ ಎಂದು ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಇಂದಿಲ್ಲಿ ಆರೋಪಿಸಿದ್ದಾರೆ. ಇಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಕುರಿತಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಆರೋಪಿಗಳು ಅಲ್ಪಸಂಖ್ಯಾತ ಸಮುದಾಯದವರಾಗಿದ್ದರಿಂದ ಅವರನ್ನು ರಕ್ಷಿಸುವಂತಹ ಕಾರ್ಯ ನಡೆಯುತ್ತಿದೆ ಎಂದು ದೂರಿದರು.  ರಾಜ್ಯದ ಹಲವೆಡೆ ಇಂತಹ ಪ್ರಕರಣಗಳು ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ಕೂಡ ವಿಫಲರಾಗುತ್ತಿದ್ದಾರೆ. ಸಾರ್ವಜನಿಕವಾಗಿ ನಾವು ಇದರ ವಿರುದ್ಧ ಪ್ರತಿಭಟನೆ ನಡೆಸಲು ಮುಂ ದಾದರೆ ಅವಕಾಶವನ್ನು ಕೂಡ ನೀಡುತ್ತಿಲ್ಲ ಎಂದು ಟೀಕಿಸಿದರು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin