ಮೂವರು ಪೊಲೀಸರ ಅಮಾನತು

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ಜ.3- ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಮೂವರು ಪೊಲೀಸರನ್ನು ಅಮಾನತುಪಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್‍ಕುಮಾರ್‍ರೆಡ್ಡಿ ಆದೇಶ ಹೊರಡಿಸಿದ್ದಾರೆ.ಶ್ರೀರಂಗಪಟ್ಟಣ ಪೊಲೀಸ್ ಠಾಣೆಯ ಹೆಡ್‍ಕಾನ್‍ಸ್ಟೇಬಲ್ ಶಿವಾನಂದ, ಕಾನ್‍ಸ್ಟೇಬೆಲ್‍ಗಳಾದ ಮಹದೇವಸ್ವಾಮಿ, ದೊರೆಸ್ವಾಮಿ ಎಂಬುವರನ್ನು ಅಮಾನತು ಪಡಿಸಲಾಗಿದೆ.ನಿನ್ನೆ ಶ್ರೀರಂಗಪಟ್ಟಣದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದರು. ಆದರೆ, ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಈ ಮೂವರು ಪೊಲೀಸರು ಅಮಾನತು ಪಡಿಸಲಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin