ಮೂವರು ಮನೆಗಳ್ಳರ ಬಂಧನ, 2 ಲಕ್ಷ ರೂ. ಮಾಲು ಜಪ್ತಿ

ಈ ಸುದ್ದಿಯನ್ನು ಶೇರ್ ಮಾಡಿ

7
ಬೆಂಗಳೂರು,ಅ.18-ಮನೆಗಳ್ಳತನ ಮಾಡುತ್ತಿದ್ದ ಮೂವರನ್ನು ಪೀಣ್ಯಾ ಪೊಲೀಸರು ಬಂಧಿಸಿ ನಗದು ಸೇರಿದಂತೆ ಎರಡು ಲಕ್ಷ ಬೆಲೆಯ ಚಿನ್ನಾಭರಣ ವಶಪಡಿಸಿ ಕೊಂಡಿದ್ದಾರೆ. ರಾಜೇಶ್(20), ಆನಂದ(26), ಬಾಲಾಜಿ(27) ಬಂಧಿತ ಮನೆಗಳ್ಳರಾಗಿದ್ದು, ಇವರಿಂದ 35 ಸಾವಿರ ನಗದು, 55 ಗ್ರಾಂ ತೂಕದ ಚಿನ್ನದ ಆಭರಣ ಹಾಗೂ ಬೆಳ್ಳಿ ಕಾಲ್‍ಚೈನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಅ.12ರಂದು ಮನೆಯೊಂದರ ಕಿಟಕಿ ಬಳಿ ಇಟ್ಟಿದ್ದ ಕೀಯನ್ನು ತೆಗೆದುಕೊಂಡು ಬೀಗ ತೆಗೆದು ಒಳನುಗ್ಗಿ ಬೀರುವಿನಲ್ಲಿದ್ದ 40 ಸಾವಿರ ಹಣ ಕಳ್ಳತನ ಮಾಡಿರುವ ಬಗ್ಗೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಅ.14ರಂದು ತೆರೆದಿದ್ದ ಬಾಗಿಲ ಮೂಲಕ ಕಳ್ಳರು ಮನೆಗೆ ನುಗ್ಗಿ 70 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳ್ಳತನ ಮಾಡಿರುವ ಬಗ್ಗೆಯೂ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಮಂದಿ ಆರೋಪಿಗಳನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್‍ಸ್ಪೆಕ್ಟರ್ ಐಯಣ್ಣ ರೆಡ್ಡಿ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದರು.

 

► Follow us on –  Facebook / Twitter  / Google+

 

Facebook Comments

Sri Raghav

Admin