ಮೂವರು ಹಗಲುದರೋಡೆಕೋರರ ಬಂಧನ, 22 ಲಕ್ಷದ ಚಿನ್ನಾಭರಣ-ಬೈಕ್ ವಶ

ಈ ಸುದ್ದಿಯನ್ನು ಶೇರ್ ಮಾಡಿ

Davanagere
ದಾವಣಗೆರೆ, ಜೂ.10- ಹಗಲು ವೇಳೆ ಕಳ್ಳತನ ಮಾಡುತ್ತಿದ್ದ ಆರೋಪದಲ್ಲಿ ಮೂವರು ಕಳ್ಳರನ್ನು ಪೊಲೀಸರು ಬಂಧಿಸಿ ಅವರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಪಡಿಸಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶಿವನಿ ಗ್ರಾಮದ ಸಂಬಂಧಿಗಳಾದ ಸ್ವಾಮಿ ಮತ್ತು ಸುರೇಶ್ ಹಾಗೂ ಹೊನ್ನಾಳಿ ತಾಲೂಕಿನ ದಾನೇಹಳ್ಳಿ ನೀಲಾಚಾರಿ ಬಂಧಿತರು.

ದಾವಣಗೆರೆ, ಶಿವಮೊಗ್ಗ, ಹಾವೇರಿ ಜಿಲ್ಲೆಗಳ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿತರು ಕಳ್ಳತನ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 705 ಗ್ರಾಂ ಚಿನ್ನಾಭರಣ, 680 ಗ್ರಾಂ ತೂಕದ ಬೆಳ್ಳಿ ವಸ್ತುಗಳು ಹಾಗೂ 60 ಸಾವಿರ ಬೆಲೆಯ ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 22 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಪಿಎಸ್‍ಐ ಗುರುರಾಜ್, ಎಸ್.ಮೈಲಾರಿ ಹರಿಹರ, ಶ್ರೀಧರ್, ಪಿಎಸ್‍ಐ ರಾಘವೇಂದ್ರ ಕಾಂಡಿಕೆ, ಸಿಬ್ಬಂದಿ ಸೇರಿದಂತೆ ಮತ್ತಿತರರು ಕಾರ್ಯಾಚರಣೆಯಲ್ಲಿದ್ದರು.

Facebook Comments

Sri Raghav

Admin