ಮೂವರ ಬಂಧನ : 5 ಲಕ್ಷ ರೂ.ಬೆಲೆಯ ಚಿನ್ನಾಭರಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ಫೆ.17- ನಗರದ ವಿವಿಧೆಡೆ ನಡೆದ ಕಳವು ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಹರಿಹರ ತಾಲೂಕಿನ ಮಲೆಬನ್ನೂರಿನ ನಾಗರಾಜ್ ಅಲಿಯಾಸ್ ಬಳ್ಳಾರಿ ನಾಗ, ಸಿದ್ದು ಉದ್ಯಾನಿ ಮತ್ತು ಶಿವರಾಜ್ ನಾಯಕ್ ಬಂಧಿತ ಆರೋಪಿಗಳು.ಬಂಧಿತರಿಂದ 5 ಲಕ್ಷ ರೂ. ಮೌಲ್ಯದ 189 ಗ್ರಾಂ ಚಿನ್ನಾಭರಣ, 582 ಗ್ರಾಂ ಬೆಳ್ಳಿ ಆಭರಣ ಮತ್ತು 2 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.ನಂಬರ್ ಪ್ಲೇಟ್ ಇಲ್ಲದೆ ಆರೋಪಿಗಳು ಬೈಕ್ನಲ್ಲಿ ತಿರುಗಾಡುತ್ತಿದ್ದಾಗ ಸಂಶಯಗೊಂಡ ಪೊಲೀಸರು ತಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಸರಿಯಾದ ಮಾಹಿತಿ ನೀಡದ ಕಾರಣ ಠಾಣೆಗೆ ಕರೆದೊಯ್ದು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಹಾವೇರಿ ಮತ್ತು ನಗರದಲ್ಲಿ ಕಳ್ಳತನ ಮಾಡಿದ ಬಗ್ಗೆ ಬಾಯಿಬಿಟ್ಟಿದ್ದಾರೆ.ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎರಡು, ಹಾವೇರಿಯಲ್ಲಿ ಎರಡು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆಂದು ಎಸ್ಪಿ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin