ಮೆಟ್ರಿಮೊನಿ ಮೂಲಕ ಯುವತಿ ಪರಿಚಯ ಮಾಡಿಕೊಂಡ, ಸರಸವನ್ನೂ ಆಡಿದ ನಂತರ ಆತ ಮಾಡಿದ್ದೇನು ಗೊತ್ತೇ..?
ಬೆಂಗಳೂರು, ಮೇ 30- ಮ್ಯಾಟ್ರಿ ಮೋನಿಯಲ್ ಜಾಲತಾಣದಲ್ಲಿ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಂತರ ಆಕೆಯ ಕೊಲೆಗೆ ಯತ್ನಿಸಿದ ಸಾಫ್ಟ್ವೇರ್ ಎಂಜಿನಿಯರೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮೂಲತಃ ಕೋಲ್ಕತ್ತಾದವನಾದ ಮುನೇಕೊಳಲು ನಿವಾಸಿ ಸುಬೈನ್ ಬರ್ಮನ್(26) ಬಂಧಿತ ಟೆಕ್ಕಿ. ನಗರದಲ್ಲಿನ ಸಾಫ್ಟ್ವೇರ್ ಕಂಪೆನಿಯೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯ್ಟರ್ ಆಗಿರುವ ಸುಬೈನ್ ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಕೋಲ್ಕತ್ತಾ ಮೂಲದ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ 26 ವರ್ಷದ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡಿದ್ದಾನೆ.
ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಸ್ವಲ್ಪದಿನ ವಾಸ ಮಾಡಿದ ಟೆಕ್ಕಿ ದೈಹಿಕ ಸಂಪರ್ಕವನ್ನು ಬೆಳೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆ ನಂತರ ಮದುವೆ ನಿರಾಕರಿಸಿ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ್ದಾನೆ. ಯುವತಿ ಮಾರತ್ಹಳ್ಳಿ ಠಾಣೆಗೆ ದೂರು ನೀಡಿದ್ದಾಳೆ. ದೂರು ದಾಖಲಿಸಿಕೊಂಡಿರುವ ಮಾರತ್ಹಳ್ಳಿ ಠಾಣೆ ಪೊಲೀಸರು ಟೆಕ್ಕಿಯನ್ನು ಬಂಧಿಸಿ ತನಿಖೆಕೈಗೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS