ಮೆಟ್ರೊ-ಕೆಎಸ್‍ಐಎಸ್‍ಎಫ್ ಸಿಬ್ಬಂದಿಗಳ ನಡುವೆ ಮಾರಾಮಾರಿ, ತನಿಖೆ ಮುಂದುವರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Praveen-Sood-Police

ಬೆಂಗಳೂರು,ಜು.7-ಮೆಟ್ರೊ ಸಿಬ್ಬಂದಿ ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‍ಐಎಸ್‍ಎಫ್) ಸಿಬ್ಬಂದಿ ನಡುವೆ ನಡೆದ ಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಿದ್ದು , ತನಿಖೆ ಮುಂದುವರೆದಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಹೇಳಿದ್ದಾರೆ.  ಈ ಸಂಜೆಯೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಸಿಬ್ಬಂದಿಯ ಇಬ್ಬರು ಹಾಗೂ ಕೆಎಸ್‍ಐಎಸ್‍ಎಫ್‍ನ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ತಪ್ಪಿತಸ್ಥರು ಯಾರೇ ಆಗಲಿ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಅವರು ತಿಳಿಸಿದರು.

ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ. ತಪ್ಪಿತಸ್ಥರು ಯಾರೆಂಬುದು ತನಿಖೆಯಿಂದ ಗೊತ್ತಾಗಲಿದೆ ಎಂದರು.
ಮೆಟ್ರೋ ಸಿಬ್ಬಂದಿ ಹಾಗೂ ಕೆಎಸ್‍ಐಎಸ್‍ಎಫ್ ಸಿಬ್ಬಂದಿ ಪ್ರತ್ಯೇಕ ದೂರುಗಳನ್ನು ನೀಡಿದ ಬಳಿಕ ದೂರಿನನ್ವಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನಾವು ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಆಯುಕ್ತರು ಹೇಳಿದರು.

ನಿನ್ನೆ ಸೆಂಟ್ರಲ್ ಕಾಲೇಜು ನಿಲ್ದಾಣವಾದ ಸರ್.ಎಂ. ವಿಶ್ವೇಶ್ವರಯ್ಯ ನಿಲ್ದಾಣಕ್ಕೆ ಮೆಟ್ರೋ ಸಿಬ್ಬಂದಿ ಆಗಮಿಸಿದ್ದಾಗ ಕೆಎಸ್‍ಐಎಸ್‍ಎಫ್ ಪಡೆ ತಪಾಸಣೆ ನಡೆಸಲು ಮುಂದಾಗಿದ್ದರು. ಆದರೆ, ತಪಾಸಣೆಗೆ ಮೆಟ್ರೋ ಸಿಬ್ಬಂದಿ ನಿರಾಕರಿಸಿದ ಹಿನ್ನೆಲೆಯಲ್ಲಿ ರಂಪಾಟ ನಡೆದಿತ್ತು. ಇದು ವಿಕೋಪಕ್ಕೆ ತಿರುಗಿ, ಕೆಎಸ್ ಐಎಸ್‍ಎಫ್‍ಹಾಗೂ ಮೆಟ್ರೋ ಸಿಬ್ಬಂದಿಯ ನಡುವೆ ತಳ್ಳಾಟವೂ ನಡೆದು ದೊಡ್ಡ ಗಲಾಟೆ ನಡೆಯಿತು. ತಮ್ಮ ಮೇಲೆ ಹಲ್ಲೆ ಮಾಡಿದರೆಂದು ಆರೋಪಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin