ಮೆಡಿಕಲ್ ಶಾಪ್ ಬಂದ್‍ಗೆ ಸಹಕರಿಸಿದರೆ ಲೈಸೆನ್ಸ್ ರದ್ದು : ಟ್ವಿಟ್ಟರ್’ನಲ್ಲಿ ಡಿಕೆಶಿ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

DK-Shivakuamr--041

ಬೆಂಗಳೂರು,ಸೆ.28-ಸರ್ಕಾರಿ ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಲ್ಲಿರುವ ಔಷಧ ವ್ಯಾಪಾರ ಮಳಿಗೆಗಳು ಇಂದು ಎಂದಿನಂತೆ ಕಾರ್ಯ ನಿರ್ಹಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಟ್ವಿಟರ್ ಮೂಲಕ ಸೂಚನೆ ನೀಡಿದ್ದಾರೆ. ಅಗತ್ಯ ಸೇವಾ ಕಾಯ್ದೆ ವ್ಯಾಪ್ತಿಯಲ್ಲಿ ಬರುವ ಔಷಧ ಮಳಿಗೆಗಳು ಯಾವುದೇ ಕಾರಣಕ್ಕೂ ಬಂದ್‍ನಲ್ಲಿ ಭಾಗವಹಿಸುವಂತಿಲ್ಲ. ಸಾರ್ವಜನಿಕರಿಗೆ ಸೇವೆ ನೀಡದ ಸರ್ಕಾರಿ ಔಷಧಿ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ ಯಾವುದೇ ಮಳಿಗೆಗಳು ಬಂದ್‍ನಲ್ಲಿ ಪಾಲ್ಗೊಂಡಿದ್ದೇ ಆದಲ್ಲಿ ಅಂತಹ ಮಳಿಗೆಗಳ ಪರವಾನಗಿ ರದ್ದುಪಡಿಸಲಾಗುವುದು. ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಿಂದ ತೆರವು ಮಾಡಿಸಲಾಗುವುದು ಎಂದು ಖಡಕ್ಕಾಗಿ ಎಚ್ಚರಿಸಿದ್ದಾರೆ.

ಔಷಧ ಮಳಿಗೆಗಳ ಮಾಲೀಕರು ಬಂದ್ ಗೆ ಕರೆ ನೀಡಿದ ಬೆನ್ನಲ್ಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಅಗತ್ಯ ಜೀವರಕ್ಷಕ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳುವಂತೆ ರಾಜ್ಯದ ಆಸ್ಪತ್ರೆಗಳಿಗೆ ಶಿವಕುಮಾರ್ ಸೂಚಿಸಿದ್ದಾರೆ. ಜಿಲ್ಲಾ, ತಾಲೂಕು, ಸಾರ್ವಜನಿಕ, ಸಮುದಾಯ ಕೇಂದ್ರ ಹಾಗೂ ಪ್ರಾಥಮಿಕ ಕೇಂದ್ರದಲ್ಲಿ ಜೀವರಕ್ಷಕ ಔಷಧ ಸಿಗಲಿದೆ ಎಂದು ಅವರು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

Facebook Comments

Sri Raghav

Admin