ಮೆರವಣಿಗೆಯಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದ ಶಾಸಕ ಹಂಪಯ್ಯಗೆ ನೋಟೀಸ್

ಈ ಸುದ್ದಿಯನ್ನು ಶೇರ್ ಮಾಡಿ

Hampoaiah--Nayak
ರಾಯಚೂರು. ಏ.26 : ಮೆರವಣಿಗೆಯಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದ ಶಾಸಕ ಹಂಪಯ್ಯ ನಾಯಕ್ ಗೆ ನೋಟಿಸ್ ನೀಡಲಾಗಿದೆ. ಏ. 23 ರಂದು ಮಾನ್ವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ವೇಳೆ ನಡೆದ ಮೆರವಣಿಗೆಯಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಕ್ಕೆ ಮಾನ್ವಿ ಕ್ಷೇತ್ರದ ಚುನಾವಣೆ ಅಧಿಕಾರಿಗಳು ಶಾಸಕ ಹಂಪಯ್ಯ ನಾಯಕ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.  23 ರಂದು ನಾಮಪತ್ರ ಸಲ್ಲಿಕೆ ವೇಳೆ ಮೆರವಣಿಗೆಯಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಬಳಸಿಕೊಂಡು ಕುರಿತು ಚುನಾವಣಾ ಅಧಿಕಾರಿಗಳು ಕಾಂಗ್ರೆಸ್ ಅಭ್ಯರ್ಥಿ ಶಾಸಕ ಹಂಪಯ್ಯ ನಾಯಕರಿಗೆ ನೋಟಿಸ್ ತಲುಪಿಸಿದ್ದು 24ಗಂಟೆಯಲ್ಲಿ ಉತ್ತರಿಸುವಂತೆ ಸೂಚಿಸಿದ್ದಾರೆ.

Facebook Comments

Sri Raghav

Admin