ಮೇಕೆದಾಟು ಶೀಘ್ರ ಜಾರಿಗೆ ವಾಟಾಳ್ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

Vatal-01

ಬೆಂಗಳೂರು, ಆ.19– ಮೇಕೆದಾಟು ಯೋಜನೆಗೆ ಯಾವುದೇ ಕಾರಣಕ್ಕೂ ಯಾರೂ ಅಡ್ಡಿ ಪಡಿಸಬಾರದು. ಈ ಯೋಜನೆಯನ್ನು ಶೀಘ್ರ ಜಾರಿಗೊಳಿಸಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುತ್ತಿರುವ ತಮಿಳು ನಾಡು ಸರ್ಕಾರದ ಧೋರಣೆ ಖಂಡಿಸಿ ಇಂದು ಕೆಂಪೇಗೌಡ ಬಸ್ ನಿಲ್ದಾಣದ ಬಳಿ ತಮಿಳುನಾಡು ಸರ್ಕಾರದ ಭೂತ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.  ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸದೆ ಕೂಡಲೇ ಯೋಜನೆಯನ್ನು ತಕ್ಷಣ ಆರಂಭಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು. ಸರ್ಕಾರ ಮೇಕೆದಾಟು ಯೋಜನೆಯನ್ನು ಯಾವಾಗ ಆರಂಭಿಸುತ್ತದೆ ಎಂಬ ಬಗ್ಗೆ ತಕ್ಷಣ ತಿಳಿಸಬೇಕು.

ಈ ಯೋಜನೆಯಿಂದ ಅನೇಕ ಭಾಗಗಳಿಗೆ ಕುಡಿಯುವ ನೀರಿನ ಸೌಲಭ್ಯ ದೊರಕುವುದಲ್ಲದೆ, ವಿದ್ಯುತ್ಛಕ್ತಿ ತಯಾರಿಕೆಗೂ ಅನುಕೂಲವಾಗುತ್ತದೆ. ಆದ್ದರಿಂದ ಶೀಘ್ರವಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin