ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ತ್ರಿನೇತ್ರ ಮಹಂತ ಸ್ವಾಮೀಜಿ ಕಣಕ್ಕೆ..?

ಈ ಸುದ್ದಿಯನ್ನು ಶೇರ್ ಮಾಡಿ

Swamiji--02

ಪಾಂಡವಪುರ,ಅ.23- ಮುಂಬರುವ 2018ರ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ತಾಲೂಕಿನ ಬೇಬಿ ಗ್ರಾಮದ ಶ್ರೀ ದುರ್ದಂಡೇಶ್ವರ ಮಹಂತ ಶಿವಯೋಗಿಗಳವರ ಮಠದ ಪೀಠಾಧ್ಯಕ್ಷ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದಾರೆ…!
ಹೀಗೊಂದು ಮಾತು ಕ್ಷೇತ್ರದ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿ ಎಂಬಂತೆ ಇತ್ತೀಚೆಗೆ ರಾಜ್ಯಮಟ್ಟದ ಬಿಜೆಪಿ ನಾಯಕರು ಚಂದ್ರವನ ಆಶ್ರಮದಲ್ಲಿ ತ್ರೀನೇತ್ರ ಮಹಂತ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಸ್ವಾಮೀಜಿ ಅವರ ಬಳಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗುವಂತೆ ಮನವೊಲಿಸುವ ಪ್ರಯತ್ನಗಳು ನಡೆದಿವೆ ಎಂಬುದು ವಿಶ್ವಾಸನೀಯ ಮೂಲಗಳಿಂದ ತಿಳಿದುಬಂದಿದೆ.

ತ್ರಿನೇತ್ರ ಶ್ರೀಗಳ ಮಠ ಕೇವಲ ವೀರಶೈವ ಲಿಂಗಾಯಿತರ ಮಠವೆಂದು ಬಿಂಬಿತವಾಗಿರದೆ ಜಾತ್ಯಾತೀತ ಮಠವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿದೆ. ಈ ಹಿಂದಿನ ಶತಾಯುಷಿ ಶ್ರೀ ಮರಿದೇವರು ಮಹಂತ ಶಿವಯೋಗಿ ಸ್ವಾಮೀಜಿಗಳಿಂದ ಹಿಡಿದು ಈಗಿನ ತ್ರಿನೇತ್ರ ಶ್ರೀಗಳವರೆಗೂ ಶ್ರೀಮಠ ಸಮಾಜದ ಎಲ್ಲಾ ಜಾತಿ, ಧರ್ಮಗಳನ್ನು ಏಕ ದೃಷ್ಟಿಯಲ್ಲಿ ನೋಡಿಕೊಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಹೇಗಾದರೂ ಸರಿ ಸ್ವಾಮೀಜಿರವರ ಮನವೊಲಿಸಿ ಮುಂಬರುವ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ತೀವ್ರ ಒತ್ತಡ ಹೇರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1.95ಲಕ್ಷ ಮತದಾರರಿದ್ದು, ಒಂದು ವೇಳೆ ಸ್ವಾಮೀಜಿ ಬಿಜೆಪಿ ಅಭ್ಯರ್ಥಿಯಾದರೆ ಇದು ಯಾವ ರೀತಿ ಬಿಜೆಪಿಗೆ ವರ್ಕ್‍ಔಟ್ ಆಗಬಹುದು ಎಂಬುದನ್ನು ಮುಂದಿನ ಚುನಾವಣೆ ಫಲಿತಾಂಶದವರೆಗೂ ಕಾದುನೋಡಬೇಕಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin