ಮೇ ಅಂತ್ಯದವರೆಗೂ ಮುಂದುವರಿಯಲಿದೆ ಮುಂಗಾರು ಪೂರ್ವ ಮಳೆ

ಈ ಸುದ್ದಿಯನ್ನು ಶೇರ್ ಮಾಡಿ

Rain---01

ಬೆಂಗಳೂರು, ಮೇ 21- ಮುಂಗಾರು ಪೂರ್ವ ಮಳೆ ಮೇ ಅಂತ್ಯದವರೆಗೂ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸರೆಡ್ಡಿ ಈ ಸಂಜೆಗೆ ತಿಳಿಸಿದ್ದಾರೆ. ಕೊಡಗಿನಲ್ಲಿ 90 ಮಿ.ಮೀ. ಮಳೆಯಾಗಿದೆ ಎಂದು ವರದಿಯಾಗಿದೆ. ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಅವರು ತಿಳಿಸಿದ್ದಾರೆ.



ಇದೇ ರೀತಿ ಮುಂಗಾರು ಪೂರ್ವ ಮಳೆ ಮೇ ಅಂತ್ಯದವರೆಗೂ ಮುಂದುವರಿಯಲಿದೆ. ಬಳಿಕ ನೈಋತ್ಯ ಮುಂಗಾರು ಮಳೆ ಆರಂಭವಾಗಲಿದೆ ಎಂದು ತಿಳಿಸಿದರು.  ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಹೆಚ್ಚಿನ ಅನಾಹುತ ಸಂಭವಿಸಿದ್ದು, ಕುರುಬರಹಳ್ಳಿಯಲ್ಲಿ ರಾಜಕಾಲುವೆಯಲ್ಲಿ ಕಾರ್ಮಿಕ ಶಾಂತಕುಮಾರ್ ಎಂಬುವವರು ಕೊಚ್ಚಿ ಹೋಗಿದ್ದಾರೆ. ಹಲವೆಡೆ ಮರಗಳು ಧರೆಗೆ ಉರುಳಿಬಿದ್ದಿವೆ. ತಗ್ಗು ಪ್ರದೇಶಗಳಲ್ಲಿ ಸಾಕಷ್ಟು ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin