ಮೇ 11 ಮತ್ತು 12 ರಂದು ಶಾಲಾ-ಕಾಲೇಜುಗಳಿಗೆ ರಜೆ

ಈ ಸುದ್ದಿಯನ್ನು ಶೇರ್ ಮಾಡಿ

Holiday--01
ಬೆಂಗಳೂರು, ಏ.26-ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಮೇ 11 ಮತ್ತು 12 ರಂದು ರಜೆ ನೀಡಲಾಗಿದೆ. ಮೇ 12 ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯುವ ಹಿನ್ನೆಲೆಯಲ್ಲಿ ಎರಡು ದಿನ ರಜೆ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೇ 11 ರಂದೇ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ಆಗಮಿಸುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ. ಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಮತದಾನದ ದಿನದಂದು ಚುನಾವಣಾ ಕಾರ್ಯದಲ್ಲಿ ನಿರತರಾಗಲಿದ್ದಾರೆ. ಅಲ್ಲದೆ, ಬಹುತೇಕ ಎಲ್ಲಾ ಶಾಲಾ-ಕಾಲೇಜುಗಳೇ ಮತಗಟ್ಟೆಗಳಾಗಿರುವುದರಿಂದ ಎರಡೂ ದಿನ ರಜೆ ನೀಡಲಾಗಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಪದವಿ ಪೂರ್ವ ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ ಮಂಡಳಿ ಈಗಾಗಲೇ ರಜೆ ಘೋಷಣೆ ಮಾಡಿದೆ. ಅದೇ ರೀತಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Facebook Comments

Sri Raghav

Admin