ಮೇ 3ಕ್ಕೆ ಸುಪ್ರೀಂನಲ್ಲಿ ಎಸ್‍ಸಿ/ಎಸ್‍ಟಿ ತೀರ್ಪು ಮರುಪರಿಶೀಲನೆ ಮನವಿ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

SC-ST-Act--01
ನವದೆಹಲಿ, ಏ.27-ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು(ದೌರ್ಜನ್ಯಗಳ ತಡೆ) ಕಾಯ್ದೆ (ಎಸ್‍ಸಿ/ಎಸ್‍ಟಿ ಕಾಯ್ದೆ) ಕುರಿತು ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ತನ್ನ ತೀರ್ಪನ್ನು ಪರಾಮರ್ಶಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮನವಿಯನ್ನು ಸುಪ್ರೀಂಕೋರ್ಟ್ ಮೇ 3ರಂದು ವಿಚಾರಣೆಗಾಗಿ ಕೈಗೆತ್ತಿಕೊಳ್ಳಲಿದೆ.

ನ್ಯಾಯಮೂರ್ತಿಗಳಾದ ಎ.ಕೆ.ಗೋಯೆಲ್ ಮತ್ತು ದೀಪಕ್ ಗುಪ್ತ ಅವರನ್ನು ಒಳಗೊಂಡ ಪೀಠದ ಮುಂದೆ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಮನವಿ ಸಲ್ಲಿಸಿ ಈ ಪ್ರಕರಣದ ತ್ವರಿತ ವಿಚಾರಣೆಗೆ ಕೋರಿದರು. ಈ ಸಂಬಂಧ ತಾವು ಈಗಾಗಲೇ ಲಿಖಿತ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು. ಈ ಸಂಬಂಧ ಕೇಂದ್ರ ಸರ್ಕಾರ ಹಾಗು ನಾಲ್ಕು ಇತರ ರಾಜ್ಯಗಳು ಮರುಪರಿಶೀಲನೆ ಅರ್ಜಿ ಸಲ್ಲಿಸಿವೆ. ಈ ಎಲ್ಲ ಅರ್ಜಿಗಳ ಬಗ್ಗೆ ಮೇ 3ರಂದು ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿ ಗೋಯೆಲ್ ಹೇಳಿದರು.

Facebook Comments

Sri Raghav

Admin