ಮೈಸೂರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್

ಈ ಸುದ್ದಿಯನ್ನು ಶೇರ್ ಮಾಡಿ

Devendra-1

ಮೈಸೂರು, ಮೇ 26- ಪ್ರಧಾನಿ ನರೇಂದ್ರಮೋದಿಯವರ ಸರ್ಕಾರ ಮೂರು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಹ ಕೆಲಸವನ್ನು ಅವರು ಮಾಡಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮೋದಿಯವರು ಪ್ರಧಾನಿಯಾದ ಮೇಲೆ ದೇಶದ ಸರ್ವಾಂಗೀಣ ಅಭಿವೃದ್ಧಿಯಾಗಿದೆ. ಅದರಲ್ಲಿ ಶೈಕ್ಷಣಿಕ, ಕೈಗಾರಿಕಾ, ಆರ್ಥಿಕ ವಲಯಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ ಎಂದರು.ವಿಶ್ವವೇ ದೇಶದತ್ತ ತಿರುಗಿ ನೋಡುವಂತಹ ರೀತಿಯಲ್ಲಿ ದೇಶವನ್ನು ಉತ್ತಮ ರೀತಿಯಲ್ಲಿ ಕೊಂಡೊಯ್ಯುತ್ತಿರುವ ಇಂತಹ ಪ್ರಧಾನಿಯ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿತ್ತು. ಇದೀಗ ಈ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಇನ್ನು ಎರಡು ವರ್ಷಗಳ ಕಾಲಾವಧಿಯಿದೆ ಎಂದು ತಿಳಿಸಿದರು.  ಮೋದಿಯವರು ಪ್ರಭಾವಿ ವ್ಯಕ್ತಿಯಾಗಿದ್ದು, ದೇಶದಲ್ಲಿ ಎಲ್ಲ ವರ್ಗದ ಜನರನ್ನು ಅಭಿವೃದ್ಧಿಪಡಿಸಲು ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಿದ್ದಾರೆ.

Devendra-2

ಅವರಿಗೆ ಈ ಸಂದರ್ಭದಲ್ಲಿ ಶುಭಾಶಯ ತಿಳಿಸಲು ಇಚ್ಛಿಸುತ್ತೇನೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಸಾಧಿಸುವ ಕೆಲಸ ಮಾಡಲು ಅವರಿಗೆ ದೇವರು ಶಕ್ತಿ ಕೊಡಲಿ ಎಂದು ಹಾರೈಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin